Categories: ಉಡುಪಿ

ಕುಂದಾಪುರ: ಹಾಲಾಡಿ-ಕೊಡ್ಗಿ ಜೋಡಿಗೆ ಗೆಲುವಿನ ಸಂಭ್ರಮ

ಕುಂದಾಪುರ: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವಿನ ಜಿದ್ದಾಜಿದ್ದಿನ ಕಣವಾದ ಕುಂದಾಪುರ ವಿಧಾನಸಭೆ ಕ್ಷೇತ್ರದಲ್ಲಿ ಹಾಲಾಡಿ-ಕೊಡ್ಗಿ ಜೋಡಿಗೆ ಗೆಲುವಿನ ಸಂಭ್ರಮ ದೊರೆತ್ತಿದೆ.

ಬಿಜೆಪಿ ಪಕ್ಷದ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ವಿರುದ್ಧ 40930 ಮತಗಳ ಅಂತರದಿಂದ ಪ್ರಚಂಡವಾದ ಜಯವನ್ನು ಗಳಿಸಿದ್ದಾರೆ.

ಕುಂದಾಪುರ ಕ್ಷೇತ್ರದಲ್ಲಿ ಸತತ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡದೆ ಇದ್ದಿದ್ದರಿಂದ ಕಿರಣ್ ಕುಮಾರ್ ಕೊಡ್ಗಿ ಅವರು ಕುಂದಾಪುರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು. ತಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡದೆ ಇದ್ದಿದ್ದರೂ ಅಭ್ಯರ್ಥಿ ಪರವಾಗಿ ಕೆಲಸ ಮಾಡಿ ಅವರ ಗೆಲುವಿಗೆ ಶ್ರಮಿಸಲಾಗುವುದು ಎನ್ನುವ ಮಾತನ್ನು ಚುನಾವಣೆ ಸಂದರ್ಭದಲ್ಲಿ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹೇಳಿದ್ದರು.

ನುಡಿದಂತೆ ನಡೆದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಕಿರಣ್ ಕುಮಾರ್ ಕೊಡ್ಗಿ ಪರವಾಗಿ ಪ್ರಚಾರವನ್ನು ಮಾಡಿದ್ದು ಮಾತ್ರವಲ್ಲದೆ 40,000 ಕ್ಕೂ ಅಧಿಕ ಮತಗಳಿಂದ ಗೆಲ್ಲಿಸಿ ಆಡಿದ ಮಾತನ್ನು ಉಳಿಸಿಕೊಂಡಿದ್ದಾರೆ. ಬಿಜೆಪಿ ಪಕ್ಷದ ಘಟಾನುಘಟಿ ನಾಯಕರುಗಳು ಸೋಲನ್ನು ಕಂಡಿದ್ದರೂ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ತನ್ನ ಸ್ವತಃ ವರ್ಚಸ್ಸಿನಿಂದ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Sneha Gowda

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

5 hours ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

5 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

5 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

6 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

6 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

6 hours ago