News Karnataka Kannada
Monday, April 29 2024
ಉಡುಪಿ

ಕುಂದಾಪುರ: ಹಾರ್ಡ್ ವೇರ್ ಶಾಪ್ ಬೆಂಕಿಗೆ ಆಹುತಿ, ಲಕ್ಷಾಂತರ.ರೂ ನಷ್ಟ

Kundapur: Hardware shop gutted in fire, loss of lakhs of rupees
Photo Credit : News Kannada

ಕುಂದಾಪುರ: ಬೈಂದೂರು ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿ 66 ರ ಮಸೀದಿ ಎದುರು ಉರ್ದು ಶಾಲೆ ಸಮೀಪವಿರುವ ರವಿರಾಜ್ ಶೆಟ್ಟಿ ಚೇರ್ಕಾಡಿ ಅವರ ಒಡೆತನದ ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಭಾನುವಾರ ಸಂಭವಿಸಿದೆ.

ಭಾನುವಾರ ಮಧ್ಯಾಹ್ನ 2.00 ಗಂಟೆಗೆ ಸುಮಾರಿಗೆ ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಕಸ್ಮಾತ್ ಬೆಂಕಿ ತಗುಲಿದೆ ಬೆಂಕಿ ಕೆನ್ನಾಲಿಗೆ ಹಾರ್ಡವೇರ್ ಸಾಮಗ್ರಿಗಳು ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

ಬೈಂದೂರು ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು, ಬೈಂದೂರು ಪೊಲೀಸ್ ಠಾಣೆ ಸಿಬ್ಬಂದಿಗಳು,ಸ್ಥಳೀಯರು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಶನಿವಾರ ತ್ರಾಸಿ ಜಂಕ್ಷನ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು