Categories: ಉಡುಪಿ

ಕುಂದಾಪುರ: ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಕುಂದಾಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಎಂಟು ವರ್ಷಗಳ ಅವಧಿಯ ಆಡಳಿತದಲ್ಲಿ ದೇಶವು ಸಾಕಷ್ಟು ಪ್ರಗತಿಯನ್ನು ಹೊಂದಿದೆ ಆಯುಷ್ಮಾನ್ ಭಾರತ್ ನಂತ ಅನೇಕ ಜನಪರ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿದೆ ಸರಕಾರಿ ಸೌಲಭ್ಯಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.

ನರೇಂದ್ರ ಮೋದಿಯವರ ೭೨ನೇ ಜನ್ಮ ದಿನಾಚರಣೆ ಪ್ರಯುಕ್ತ ನಡೆಯುತ್ತಿರುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಬೈಂದೂರು ಮಂಡಲದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆ ಸಹಯೋಗದೊಂದಿಗೆ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ನಡದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಪ್ರಕಾಶ ಪೂಜಾರಿ ಜೆಡ್ಡು,ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ, ಕುಂದಾಪುರ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಯಶಸ್ವಿನಿ,ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹರೀಶ ಮೇಸ್ತ,ಗಂಗೊಳ್ಳಿ ಗ್ರಾ.ಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಮತ್ತು ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ,ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಮಹಿಳಾ ಮೋರ್ಚಾದ ಶಾಂತಿ ಖಾರ್ವಿ,ಅನಿತಾ ಆರ್.ಕೆ,ಗ್ರಾಪಂ ಸದಸ್ಯರು,ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್ ಸ್ವಾಗತಿಸಿ ವಂದಿಸಿದರು.

 

Ashika S

Recent Posts

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

1 hour ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

3 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago