News Karnataka Kannada
Wednesday, May 08 2024
ಉಡುಪಿ

ಕುಂದಾಪುರ: ಕೈಗಾರಿಕಾ ಮತ್ತು ತಂತ್ರಜ್ಞಾನ ವಿಭಾಗದ ಭೇಟಿ ಕಾರ್ಯಕ್ರಮ

Industrial and Technology Department Visit Programme
Photo Credit : News Kannada

ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ಮತ್ತು ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕೈಗಾರಿಕಾ ಮತ್ತು ತಂತ್ರಜ್ಞಾನ ವಿಭಾಗದ ಭೇಟಿ ಕಾರ್ಯಕ್ರಮ ನಡೆಯಿತು.

ವಿಜ್ಞಾನ ಮತ್ತು ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಮಂಗಳೂರು ವಿಶ್ವ ವಿದ್ಯಾನಿಲಯದ ಡೇಟಾ ಸೆಂಟರ್ ಹಾಗೂ ಮೈಕ್ರೋಟ್ರೋನ್ ಸೆಂಟರ್ ಗೆ ಭೇಟಿ ನೀಡಿ ಅಲ್ಲಿನ ಕಾರ್ಯವಿಧಾನಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಂಗಳಗಂಗೋತ್ರಿ ಗ್ರಂಥಾಲಯಕ್ಕೆ ಭೇಟಿ ನೀಡಿದ ವಿದ್ಯಾರ್ಥಿಗಳು ಅಲ್ಲಿನ ಗ್ರಂಥ ನಿರ್ವಹಣೆ ಹಾಗೂ ದತ್ತಾಂಶಗಳ ನಿರ್ವಹಣೆ ಬಗ್ಗೆ ಮಾಹಿತಿಯನ್ನು ಪಡೆದರು.ವಿಶ್ವವಿದ್ಯಾನಿಲಯದ ಡೇಟಾ ಸೆಂಟರ್ ನ ಮುಖ್ಯಸ್ಥೆ  ಶಶಿರೇಖಾ, ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ ಇದರ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಹರೀಶ್ ಕಾಂಚನ್, ಶ್ರೀಕಾಂತ್ ಮತ್ತು ಮೇಘಾ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು