ಕುಂದಾಪುರ: ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಾಕೆರೆಯಲ್ಲಿ ಚಿರತೆಗಳು ಕಳೆದ ಎರಡು ತಿಂಗಳಿಂದ ಸಂಚಾರ ಮಾಡುತ್ತಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಬಡಾಕೆರೆ ಗ್ರಾಮದ ಆಚಾರಬೆಟ್ಟು ಪ್ರದೇಶದಲ್ಲಿ ಗುರುವಾರ ರಾತ್ರಿ ಸುಮಾರು 8.30ರ ಹೊತ್ತಿಗೆ ಚಿರತೆ ರಸ್ತೆಯಲ್ಲಿ ಹೋಗುತ್ತಿರುವುದನ್ನು ವಾಹನ ಸವಾರರು ಗಮನಿಸಿ ಚಿತ್ರ ಸಹಿತ ಸರೆಹಿಡಿದ್ದಾರೆ.
ಕೆಲವು ದಿನಗಳಿಂದ ಆಚಾರಬೆಟ್ಟು ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದೆ,3 ಕ್ಕೂ ಅಧಿಕ ಜಾನುವಾರುಗಳನ್ನು ಬಲಿ ತೆಗೆದುಕೊಂಡಿವೆ.
ಶಿವಮೊಗ್ಗ ಕ್ಷೇತ್ರದ ಸಂಸದರಾದ ಬಿ ವೈ ರಾಘವೇಂದ್ರ ಅವರು ಬೈಂದೂರು ಕ್ಷೇತ್ರದ ಹೆಮ್ಮಾಡಿ ಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ನಾಡ ಗ್ರಾಮದಲ್ಲಿ ಕಾಣಿಸಿಕೊಳ್ಳುತ್ತಿರುವ ಚಿರತೆಗಳ ಹಾವಳಿ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದರು.
ಅರಣ್ಯ ಇಲಾಖೆ ಇಲ್ಲಿ ತನಕ ಚಿರತೆಯನ್ನು ಸೆರೆ ಹಿಡಿಯಲು ಯಾವುದೇ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ.