News Karnataka Kannada
Sunday, April 28 2024
ಉಡುಪಿ

ಕುಂದಾಪುರ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

Meritorious students felicitated
Photo Credit : News Kannada

ಕುಂದಾಪುರ: ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಮಕ್ಕಳು ಉತ್ತಮ ದರ್ಜೆಯಲ್ಲಿ ತೇರ್ಗಡೆ ಆಗುತ್ತಿರುವುದು ಶಿಕ್ಷಣದಲ್ಲಿ ಕ್ರಾಂತಿ ಸೃಷ್ಟಿ ಆಗಿದೆ ಎಂದು ಹೇಳಬಹುದು.ಮಕ್ಕಳಿಗೆ ವಿದ್ಯಾಭ್ಯಾಸ ನೀಡುವುದರ ಜತೆಗೆ ಸಂಸ್ಕೃತಿ ಮತ್ತು ಆಚಾರ ವಿಚಾರಗಳನ್ನು ಕಲಿಸಿಕೊಡುವುದರ ಬಗ್ಗೆ ಪೋಷಕರು ಹೆಚ್ಚಿನ ಗಮನಹರಿಸಬೇಕು ಎಂದು ಸುಪರ್ ಗ್ರೇಡ್ ಗುತ್ತಿಗೆದಾರರಾದ ಕೆ.ಆರ್.ನಾಯಕ್ ಕುಂದಾಪುರ ಹೇಳಿದರು.

ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯ ರಂಗ ಮಂದಿರದಲ್ಲಿ ಭಾನವಾರ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಅನ್ನಪೂರ್ಣ ಸೇವಾ ಬಂಧು ಟ್ರಸ್ಟ್ ಕುಂದಾಪುರ ಟ್ರಸ್ಟಿಗಳಾದ ಗೀತಾ ಆರ್.ನಾಯಕ್ ಮತ್ತು ಸಮಾಜ ಸೇವಕರಾದ ಸಾಯಿನಾಥ ಶೇಟ್ ಕುಂದಾಪುರ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶ್ಮಿತಾ ದೇವಾಡಿಗ ತ್ರಾಸಿ ಹಾಗೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಆಲೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ರಕ್ಷಾ ಶೆಟ್ಟಿ ಹಾಗೂ ಹಕ್ಲಾಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ಯಾಮಲ ಅವರನ್ನು ಅನ್ನಪೂರ್ಣ ಸೇವಾ ಬಂಧು ಟ್ರಸ್ಟ್ ಕುಂದಾಪುರ ವತಿಯಿಂದ ಸನ್ಮಾನಿಸಲಾಯಿತು. ಪತ್ರಕರ್ತರಾದ ಜಗದೀಶ ದೇವಾಡಿಗ ಮುಳ್ಳಿಕಟ್ಟೆ ಸ್ವಾಗತಿಸಿ,ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು