Categories: ಉಡುಪಿ

ಕುಂದಾಪುರದಲ್ಲಿ ಗಣಿ ಇಲಾಖೆಯ ಕಾರ್ಯಾಚರಣೆ : ಮರಳು ದಕ್ಕೆಯಲ್ಲಿದ್ದ 5 ಲಾರಿಗಳು ವಶ

ಕುಂದಾಪುರ: ತಾಲೂಕು ವಂಡ್ಸೆ ಹೋಬಳಿಯ ಹಟ್ಟಿಯಂಗಡಿ ಹಾಗೂ ಹೆಮ್ಮಾಡಿ ಪರಿಸರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ರಾತ್ರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ಕಾರ್ಯಾಚರಣೆ ನಡೆಸಿ 5 ಟಿಪ್ಪರ್ ಲಾರಿಗಳನ್ನು ವಶ ಪಡಿಸಿಕೊಂಡಿದ್ದಾರೆ‌.

ಹಟ್ಟಿಯಂಗಡಿ ಗ್ರಾಮದ ಹಟ್ಟಿಕುದ್ರು ಹಾಗೂ ಹೆಮ್ಮಾಡಿ ಗ್ರಾಮದ ಕನ್ನಡಕುದ್ರು ಎಂಬಲ್ಲಿ ಪಂಚಗಂಗಾವಳಿ ನದಿಯಿಂದ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸ್ವೀಕೃತವಾದ ದೂರಿನ ಮೇರೆಗೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು ಅವರ ಮಾರ್ಗದರ್ಶನದಲ್ಲಿ ಶುಕ್ರವಾರ ಮೇ. 19 ರ ರಾತ್ರಿ 10 ಗಂಟೆಗೆ ಹಟ್ಟಿಕುದ್ರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಮರಳು ದಕ್ಕೆಯಲ್ಲಿದ್ದ 4 ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ರಾತ್ರಿ 1 ಗಂಟೆಗೆ ಕನ್ನಡಕುದ್ರು ಎಂಬಲ್ಲಿ ದಾಳಿ ನಡೆಸಿ ಮರಳು ಸಹಿತ 1 ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

ಭೂವಿಜ್ಞಾನಿ ಯವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಅನಧಿಕೃತ ಮರಳು ಸಾಗಾಣಿಕೆಗೆ ಬಳಸುತ್ತಿದ್ದ 4 ಲಾರಿಗಳನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಹಾಗೂ 1 ಲಾರಿಯನ್ನು ಕುಂದಾಪುರ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ.

Ashika S

Recent Posts

ಫೇಕ್‌ ನ್ಯೂಸ್‌: ಕೋವಿಶೀಲ್ಡ್​ ಪಡೆದವರು ತಂಪುಪಾನಿಯ,ಐಸ್​ ಕ್ರೀಮ್ ಸೇವಿಸಬಾರದು

ಕೊರೊನಾ ಸಂದರ್ಭದಲಲಿ ಕೋವಿಶೀಲ್ಡ್‌ ಪಡೆದವರು ತಂಪುಪಾನಿಯ,ಐಸ್​ ಕ್ರೀಮ್ ಸೇವಿಸಬಾರದು ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ

5 mins ago

ಬಿಸಿಲಿನ ಶಾಖಕ್ಕೆ ರಾಯಚೂರಿನಲ್ಲಿ ಐವರು ಬಲಿ : ಹೊತ್ತಿ ಉರಿದ ಕಾರು

ಜಿಲ್ಲೆಯಲ್ಲಿ ಬಿಸಿಲು ಆವರಿಸಿಕೊಂಡಿದ್ದು, ಬಿಸಿಲಿನ ಸಾಖಕ್ಕೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಮೃತಪಟ್ಟಿದ್ದಾರೆ. ಹಾಗೂ ಶಕ್ತಿನಗರದಲ್ಲಿ ಕಾರಿಗೆ ಬೆಂಕಿ…

21 mins ago

ಇಂದು (ಮೇ 04) ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ

ಜನ ಸಮುದಾಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಅಗ್ನಿ ಶಾಮಕದಳದ ವೀರರನ್ನು ಗೌರವಿಸಲು ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು…

22 mins ago

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಬೀದಿ‌ ಕಾಳಗ : ವಿಡಿಯೋ ವೈರಲ್

ಮಂಗಳೂರಿನ ಹೊರ ವಲಯ ವಳಚ್ಚಿಲ್‌ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಜಗಳವಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜ್ ಫೆಸ್ಟ್…

41 mins ago

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಅಮಿತ್‌ ಶಾ ವಿರುದ್ಧ ಕೇಸ್‌ ದಾಖಲು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ತೆಲಂಗಾಣದಲ್ಲಿ ಕೇಸ್‌ ದಾಖಲಾಗಿದೆ. ಮುಖ್ಯ ಚುನಾವಣಾಧಿಕಾರಿ…

43 mins ago

ಕೇಂದ್ರ ಸಚಿವ ಭಗವಂತ ಖೂಖಾ ಒಬ್ಬ ಸುಳ್ಳಿನ ಸರ್ದಾರ : ಖಂಡ್ರೆ ಆರೋಪ

ನಗರದಲ್ಲಿ ಸಚಿವ ಈಶ್ವರ ಖಂಡ್ರೆ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಖಾ ವಿರುದ್ದ ಬ್ಯಾಟಿಂಗ್ ಮಾಡಿದ್ದಾರೆ.

1 hour ago