News Karnataka Kannada
Sunday, April 28 2024
ಉಡುಪಿ

ಕುಂದಾಪುರ: ಯೋಜನೆಗಳ ಜಾರಿಗೆ ಸಾಧಕ ಬಾಧಕಗಳ ಚರ್ಚೆ ಅಗತ್ಯ -ಶಾಸಕ ಗುರುರಾಜ್ ಗಂಟಿಹೊಳೆ ಅಭಿಮತ

Mla Gururaj Gantihole feels that there is a need to discuss the pros and cons of implementation of schemes.
Photo Credit : News Kannada

ಕುಂದಾಪುರ: ಗ್ರಾಮಾಂತರ ಪ್ರದೇಶಗಳನ್ನು ಸೇರಿಸಿಕೊಂಡು ಬೈಂದೂರು ಪಟ್ಟಣ ಪಂಚಾಯತ್ ಅನ್ನು ರಚಿಸಿರುವುದು ಅವೈಜ್ಞಾನಿಕವಾಗಿದೆ,ಹಳ್ಳಿ ಪ್ರದೇಶಗಳು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿದ್ದರಿಂದ ಜನರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ.ಯಾವುದೇ ಯೋಜನೆಗಳನ್ನು ಜಾರಿಗೊಳಿಸುವಾ ಮೊದಲು ಸಾಧಕ ಬಾಧಕಗಳ ಬಗ್ಗೆ ಚರ್ಚಿಸುವುದು ಅಗತ್ಯ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಹೇಳಿದರು.

ಬೈಂದೂರು ಪರಿಚಯ ಹೊಟೇಲ್ ನ ಸಭಾಂಗಣದಲ್ಲಿ ಪರ್ತಕರ್ತರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭೌಗೋಳಿಕವಾಗಿ ವಿಸ್ತಾರವಾದ ಕ್ಷೇತ್ರಗಳಲ್ಲಿ ಒಂದಾದ ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಹಲವು ಸಾವಾಲುಗಳು ನಮ್ಮ ಮುಂದೆ ಇದೆ,ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು, ವಾರಾಹಿ ಯೋಜನೆಯ ನೀರಾವರಿ ಲಾಭವನ್ನು ಗರಿಷ್ಠ ಪ್ರಮಾಣದಲ್ಲಿ ದೊರಕುವಂತೆ ಮಾಡುವ ಕುರಿತು ಚಿಂತನೆ ಅಗತ್ಯ.ಸುಂದರ ಬೈಂದೂರನ್ನು ಸಮೃದ್ಧ ಬೈಂದೂರನ್ನಾಗಿ ರೂಪಿಸಲು ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಬೇಕು ಎಂದು ಅಭಿಪ್ರಾಯಪಟ್ಟರು.

ಬೈಂದೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಂದುಕಾ ಎ.ಎಸ್, ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಭಾಕರ ಆಚಾರ್ಯ, ಕುಂದಾಪುರ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಚಂದ್ರಮ ತಲ್ಲೂರು ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು