ಕುಂದಾಪುರ: ಬೈಂದೂರು ತಾಲೂಕಿನ ಮರವಂತೆ ಭಾಗದ ಬಿಜೆಪಿ ಪಕ್ಷದ ಘಟಕದ ವತಿಯಿಂದ ಬೈಂದೂರು ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಗುರುರಾಜ್ ಗಂಟೆಹೊಳೆ ಅವರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಶಕ್ತಿ ಕೇಂದ್ರ ಕಾರ್ಯಕರ್ತರ ಸಭೆ ಮರವಂತೆ ಸಾಧನ ಸಭಾಭವನದಲ್ಲಿ ಶನಿವಾರ ನಡೆಯಿತು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಅಭಿನಂದನಾ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ ಬಿಜೆಪಿ ಭದ್ರಕೋಟೆಯಾದ ಮರವಂತೆ ಭಾಗದ ಜನರು ಅತಿ ಹೆಚ್ಚು ಮತವನ್ನು ನೀಡುವುದರ ಮುಖೇನ ನನ್ನ ಗೆಲುವಿಗೆ ಸಹಕಾರವನ್ನು ನೀಡಿದ್ದಾರೆ, ಕಾರ್ಯಕರ್ತರ ಶ್ರಮದಿಂದ ಇದು ಸಾಕಾರಗೊಂಡಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಾಜಿ ತಾಲೂಕ್ ಪಂಚಾಯತ್ ಅಧ್ಯಕ್ಷ ಮಹೇಂದ್ರ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅನಿತಾ ಆರ್ ಕೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕಿಶೋರ್ ಶೆಟ್ಟಿ,ಶಕ್ತಿಕೇಂದ್ರ ಅಧ್ಯಕ್ಷ ಸತೀಶ್ ಖಾರ್ವಿ, ಪಂಚಾಯತ್ ಉಪಾಧ್ಯಕ್ಷ ಲೋಕೇಶ್ ಖಾರ್ವಿ ಹಾಗೂ ಗ್ರಾಮ ಪಂಚಾಯತ್ ಸರ್ವಸದಸ್ಯರು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ರಾಘವೇಂದ್ರ ಕಾಂಚನ್ ಸ್ವಾಗತಿಸಿ, ವಂದಿಸಿದರು.