ಕುಂದಾಪುರ: ರೋಟರಿ ಇಂಡಿಯಾ ಲಿಟರಸಿ ಮಿಷನ್ ಕೊಡಮಾಡುವ ನೇಶನ್ ಬಿಲ್ಡರ್ ಅವಾರ್ಡ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಉಮೇಶ್ ಶೆಟ್ಟಿ ಕೊತ್ತಾಡಿ ವಹಿಸಿದ್ದರು.ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ,ಗಂಗೊಳ್ಳಿಯ ಸ.ವಿ. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ, ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ಸಂದೀಪ್ ಕುಮಾರ್, ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅನುಷಾ ಸಿ. ಬಂಗೇರ ಅವರಿಗೆ ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ನೇಶನ್ ಬಿಲ್ಡರ್ ಅವಾರ್ಡ್ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.
ಜೋನಲ್ ಲೆಫ್ಟಿನೆಂಟ್ ಪೂರ್ಣಿಮಾ ಭವಾನಿ ಶಂಕರ್ ಶುಭಾಶಂಸನೆಗೈದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣ ಆರ್.ಕೆ. ಶುಭ ಹಾರೈಸಿದರು. ಲಿಟರಸಿ ಚೇರ್ಮನ್ ದಿನಕರ್ ಶ್ಯಾನುಭಾಗ್ ಸ್ವಾಗತಿಸಿದರು. ರೋಟರಿ ಕಾರ್ಯದರ್ಶಿ ಚಂದ್ರಕಲಾ ತಾಂಡೇಲ ವಂದಿಸಿದರು. ಉಪನ್ಯಾಸಕಿ ರೇಷ್ಮಾ ಶೆಟ್ಟಿ ನಿರೂಪಿಸಿದರು.