News Karnataka Kannada
Sunday, April 28 2024
ಉಡುಪಿ

ಕುಂದಾಪುರ: ಹೆಚ್ಚುವರಿ ಆಧಾರದ ಮೇಲೆ ದೈಹಿಕ ಶಿಕ್ಷಕರ ವರ್ಗಾವಣೆ, ಮಕ್ಕಳ ಪೋಷಕರ ಆಕ್ರೋಶ

Parents of children protest against transfer of physical teachers on extra basis
Photo Credit : News Kannada

ಕುಂದಾಪುರ: ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯ ದೈಹಿಕ ಶಿಕ್ಷಣ ಶಿಕ್ಷರನ್ನು ಹೆಚ್ಚುವರಿ ಆಧಾರದ ಮೇಲೆ ಬೇರೆ ಶಾಲೆಗೆ ವರ್ಗಾವಣೆ ಮಾಡಿರುವುದನ್ನು ಖಂಡಿಸಿ, ಶಿಕ್ಷಕರನ್ನು ಮರು ನೇಮಕ ಮಾಡುವಂತೆ ಆಗ್ರಹಿಸಿ ಹೊಸಾಡು ಶಾಲೆಯ ಎಸ್‍ಡಿಎಂಸಿ ಮತ್ತು ಗ್ರಾಮಸ್ಥರ ವತಿಯಿಂದ ಶಿವಮೊಗ್ಗ ಕ್ಷೇತ್ರ ಸಂಸದ ಬಿ.ವೈ.ರಾಘವೇಂದ್ರ ಮತ್ತು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಶುಕ್ರವಾರ ಹೆಮ್ಮಾಡಿಯಲ್ಲಿ ಮನವಿಯನ್ನು ಸಲ್ಲಿಸಲಾಯಿತು.

ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯಲ್ಲಿ 1 ರಿಂದ 8ನೇ ತರಗತಿ ವರೆಗೆ ವಿದ್ಯಾಭ್ಯಾಸವನ್ನು ನೀಡಲಾಗುತ್ತಿದೆ ಪ್ರಸ್ತುತ ಶಾಲೆಯಲ್ಲಿ 55 ಮಕ್ಕಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಶಾಲೆಯಲ್ಲಿ ಇಬ್ಬರು ಸರಕಾರಿ ಶಿಕ್ಷಕರು ಮತ್ತು ಒಂದು ಅತಿಥಿ ಶಿಕ್ಷಕರಿದ್ದು,ಜಿಪಿಟಿ ಶಿಕ್ಷಕರು ಸಹಿತ ಇಬ್ಬರು ಶಿಕ್ಷಕರ ಕೊರತೆ ಇದೆ, ಶಿಕ್ಷಕರ ಕೊರತೆ ನಡುವೆ ಹೆಚ್ಚುವರಿ ಆಧಾರದ ಮೇಲೆ ದೈಹಿಕ ಶಿಕ್ಷಣ ಶಿಕ್ಷರನ್ನು ವರ್ಗಾವಣೆ ಮಾಡಿರುವುದು ಪೋಷಕರ ಆಕ್ರೋಶ ಕಾರಣವಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಶಾಲೆ ಎಸ್‍ಡಿಎಂಸಿ ಅಧ್ಯಕ್ಷೆ ರೇಖಾ ಗಣೇಶ್, ವಿಶ್ವನಾಥ್ ಶೆಟ್ಟಿ,ಸುರೇಶ್ ಶೆಟ್ಟಿಗಾರ್, ಸಂತೋಷ ಮೊಗವೀರ, ನಾಗರತ್ನ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು