News Karnataka Kannada
Saturday, May 04 2024
ಉಡುಪಿ

ಕುಂದಾಪುರ: ಶ್ರೀ ಕ್ಷೇತ್ರ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮ

Kundapur: Sri Kshetra Maranakatte Sri Brahmalingeswara Deva Jatra Mahotsava programme
Photo Credit : News Kannada

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶ್ರೀ ಕ್ಷೇತ್ರ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ಮಕರ ಸಂಕ್ರಾತಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಪ್ರದಾಯ ಬದ್ಧವಾಗಿ ಶನಿವಾರ ವಿಜೃಂಭಣೆಯಿಂದ ನಡೆಯಿತು.

ಜಾತ್ರಾ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಶ್ರೀ ಬ್ರಹ್ಮಲಿಂಗೇಶ್ವರ ದೇವರಿಗೆ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣು ಕಾಯಿ ಸೇವೆ,ಗೆಂಡಸೇವೆ,ಮಂಡಲ ಸೇವೆ,ಕಡುಬು ನೈವೇದ್ಯ ಸೇವೆ,ಯಕ್ಷಗಾನ ಬಯಲಾಟ ಕಾರ್ಯಕ್ರಮ, ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಕುಂದಾಪುರ,ಬೈಂದೂರು ತಾಲೂಕು ಮತ್ತು ತುಳುನಾಡಿನ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಹರಕೆಯನ್ನು ಸಲ್ಲಿಸಿದರು.

ಜನವರಿ 15 ಮತ್ತು 16 ರಂದು ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು