News Karnataka Kannada
Monday, April 29 2024
ಉಡುಪಿ

ಕುಂದಾಪುರ: ತಾಲೂಕು ಮಟ್ಟದ ಮಹಿಳಾ ಸಮಾವೇಶ, ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ

Taluk-level women's conference, women's seminar programme
Photo Credit : News Kannada

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಬೈಂದೂರು ತಾಲೂಕು,ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಜ್ಞಾನ ವಿಕಾಸ ಕೇಂದ್ರಗಳ ಸಹಯೋಗದೊಂದಿಗೆ ನಾಗೂರು ಗೋಪಾಲಕೃಷ್ಣ ಒಡೆಯರ ಮಠದಲ್ಲಿ ತಾಲೂಕು ಮಟ್ಟದ ಮಹಿಳಾ ಸಮಾವೇಶ ಹಾಗೂ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಶನಿವಾರ ನಡೆಯಿತು.

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ ಗೋಪಾಲ್ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಹಿಳೆಯರು ಸಂಘ ಸಂಸ್ಥೆಗಳ ಪ್ರಯೋಜನವನ್ನು ಪಡೆದುಕೊಂಡು ಸ್ವ ಉದ್ಯೋಗ ಮಾದರಿಯ ಕೆಲಸಗಳನ್ನು ಮಾಡುವುದರ ಮುಖೇನ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಹೇಳಿದರು.

ಕಿರಿ ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ, ಬೈಂದೂರು ತಾಲೂಕಿನ ತಹಸೀಲ್ದಾರರಾದ ಶ್ರೀಕಾಂತ್ ಎಸ್ ಹೆಗಡೆ,ಕುಂದಾಪುರ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿವೃದ್ಧಿ ಅಧಿಕಾರಿ ಶ್ವೇತಾ, ಉತ್ತರ ಕನ್ನಡ ಜಿಲ್ಲೆಯ ನಿರ್ದೇಶಕರಾದ ಮಹೇಶ್ ಎಂ ಡಿ, ಬೈಂದೂರು ವಲಯ ಯೋಜನಾಧಿಕಾರಿ ವಿನಾಯಕ ಪೈ ಮತ್ತಿತರರು ಉಪಸ್ಥಿತರಿದ್ದರು.

ಮಹಿಳಾ ವಿಚಾರಗೋಷ್ಠಿ ಮತ್ತು ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು