ಕುಂದಾಪುರ: ಗೋಪಾಲ ಪೂಜಾರಿ ಅವರ ನಾಯಕತ್ವ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿದ ಉಪ್ಪುಂದ ಗ್ರಾಮದ ಕರ್ಕಿಕಳಿ ಭಾಗದ ಯುವಕರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ರಾಜು ಎಸ್ ಪೂಜಾರಿ, ಬೈಂದೂರು ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.