News Karnataka Kannada
Tuesday, April 16 2024
Cricket
ಉಡುಪಿ

ಪರಸ್ಪರ ಹೊಡೆದಾಡಿಕೊಂಡ ಕಾರ್ಮಿಕರು: ಇಬ್ವರಿಗೂ ಗಂಭೀರ ಗಾಯ

Labourers clash with each other, two seriously injured
Photo Credit : News Kannada

ಉಡುಪಿ: ವಲಸೆ ಕಾರ್ಮಿಕರಿಬ್ಬರು ಹೊಡೆದಾಡಿಕೊಂಡು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ನಡೆದಿದೆ.

ಹೊಡೆದಾಡಿಕೊಂಡ ಕಾರ್ಮಿಕರನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿಯ ನಿವಾಸಿಗಳಾದ 45ವರ್ಷದ ಮಾಗಂದಪ್ಪ ಹಾಗೂ 34ವರ್ಷದ ಶಿವ ಎಂದು ಗುರುತಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡು ಬಿದ್ದಿದ್ದ ಇಬ್ಬರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಕಾರ್ಯಾಚರಣೆಗೆ ಸಂಚಾರಿ ಪೋಲಿಸರು ಸಹಕರಿಸಿದರು.

ಈ ಬಗ್ಗೆ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಗಾಯಾಳುಗಳ ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು