ಮಣಿಪಾಲ: ಕೆಎಫ್ ಸಿ ಬಳಿ ಮಣಿಪಾಲ-ಉಡುಪಿ ರಾಷ್ಟ್ರೀಯ ಹೆದ್ದಾರಿ 169ಎ ರಲ್ಲಿ ಗುಡ್ಡ ಕುಸಿತ ಉಂಟಾಗಿದೆ. ನಿರಂತರ ಮಳೆಯಿಂದ ಮಣ್ಣು ಹದಗೊಂಡು ಗುಡ್ಡ ಜರಿದಿದೆ. ಗುಡ್ಡದ ಮೇಲೆ ಕಟ್ಟಡಗಳಿರುವುದರಿಂದ ಆತಂಕ ಸೃಷ್ಟಿಯಾಗಿದೆ.
ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ವಾಹನ ಸವಾರರಿಗೂ ಭೀತಿ ಉಂಟಾಗಿದೆ. ನಿನ್ನೆಯಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.