News Karnataka Kannada
Monday, April 29 2024
ಉಡುಪಿ

ಮಹುವಾ ಮೊಯಿತ್ರಾ ಸಂಸದರು ಎನ್ನುವ ಪದಕ್ಕೆ ಕಳಂಕ ತಂದಿದ್ದಾರೆ: ಶೋಭಾ ಕರಂದ್ಲಾಜೆ

Mahua Moitra has tarnished the word 'MP': Shobha Karandlaje
Photo Credit : News Kannada

ಉಡುಪಿ: ಮಹುವಾ ಮೊಯಿತ್ರಾ ಸಂಸತ್ತಿನಲ್ಲಿ ಪ್ರಶ್ನೆ ಕೇಳುವುದಕ್ಕೆ ಭ್ರಷ್ಟಾಚಾರ ಮಾಡಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಮತ್ತು ಕೆಟ್ಟ ಸಂದೇಶ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸಂಸತ್ ಸ್ಥಾನದಿಂದ ಉಚ್ಚಾಟನೆ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪ್ರಜಾತಂತ್ರ ವ್ಯವಸ್ಥೆಗೆ ಕಪ್ಪು ಚುಕ್ಕೆ. ಆಕೆ ಸಂಸದರು ಎನ್ನುವ ಪದಕ್ಕೆ ಕಳಂಕ ತಂದಿದ್ದು, ಸಂಸತ್ತಿನ ಪಾವಿತ್ರತೆ ಕಡೆಗಣಿಸಿದ್ದಕ್ಕೆ ಶಿಕ್ಷೆ ಆಗಬೇಕು. ಸಮಿತಿ ನೀಡಿರುವ ವರದಿಗೆ ತಕ್ಕಂತ ಶಿಕ್ಷೆ ಆಗಲೇಬೇಕು ಎಂದರು.

ನಾವು ಕೇಳುವ ಪ್ರಶ್ನೆಗಳನ್ನು ಗುಪ್ತವಾಗಿ ಇಡಬೇಕು. ಪಾರ್ಲಿಮೆಂಟ್ ನ ಒಳಗೆ ಬರುವ ತನಕ ಉತ್ತರ ಯಾರಿಗೂ ಗೊತ್ತಾಗುವುದಿಲ್ಲ. ಒಂದು ಪ್ರಶ್ನೆಗೆ ಒಬ್ಬ ಅಧಿಕಾರಿ 15- 20 ದಿನ ಶ್ರಮಪಡುತ್ತಾರೆ. ಅಧಿಕಾರಿಗಳ ತಂಡ ಇದಕ್ಕೆ ಕೆಲಸ ಮಾಡುತ್ತೆ. ತಪ್ಪು ಸಂದೇಶ ಹೋಗಬಾರದು ಎಂಬ ಕಾರಣಕ್ಕೆ ಚರ್ಚೆ ಮಾಡುತ್ತಾರೆ. ಆದರೆ ಮಹುವಾ ಪವಿತ್ರವಾದ ಸದನವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಸ್ವಂತ ಲಾಭಕ್ಕಾಗಿ ಸಾರ್ಥಕಾಗಿ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಎಂದು ಕಿಡಿಕಾರಿದರು.

ಆರ್ ಎಸ್ಎಸ್ ನಲ್ಲಿ ದಲಿತರ ನಿರ್ಲಕ್ಷ್ಯ ಗೂಳಿಹಟ್ಟಿ ಶೇಖರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆರ್ ಎಸ್ ಎಸ್ ಶಾಖೆಗೆ ಹೋದವರು ಈ ರೀತಿ ಮಾತನಾಡಲು ಸಾಧ್ಯವಿಲ್ಲ. ಎಲ್ಲ ವರ್ಗದವರು ಒಟ್ಟಾಗಿ ಇರಬೇಕು ಎನ್ನುವುದೇ ಆರ್ ಎಸ್ ಎಸ್ ಆಶಯ. ಭಾರತದ ಅಭ್ಯುದಯಕ್ಕೆ ಇದುವೇ ಮಾರ್ಗ ಎಂದು ಆರ್ ಎಸ್ ಎಸ್ ನಂಬಿದೆ. ಗೂಳಿಹಟ್ಟಿ ಅವರಿಗೆ ಆರ್ ಎಸ್ ಎಸ್ ಬಗ್ಗೆ ತಪ್ಪು ಮಾಹಿತಿ ಇದೆ, ಅವರು ಸಂಘಕ್ಕೆ ಬರಲಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು