News Karnataka Kannada
Saturday, April 27 2024
ಉಡುಪಿ

ಮಲಗಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ: ಗಂಭೀರ ಗಾಯ

ಮನೆಯ ಜಗುಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಶಿರ್ವ ಗ್ರಾಪಂ ವ್ಯಾಪ್ತಿಯ ಕಲ್ಲೊಟ್ಟು ಬಳಿ ಭಾನುವಾರ ರಾತ್ರಿ ಸಂಭವಿಸಿದೆ.
Photo Credit : NewsKarnataka

ಉಡುಪಿ: ಮನೆಯ ಜಗುಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಶಿರ್ವ ಗ್ರಾಪಂ ವ್ಯಾಪ್ತಿಯ ಕಲ್ಲೊಟ್ಟು ಬಳಿ ಭಾನುವಾರ ರಾತ್ರಿ ಸಂಭವಿಸಿದೆ.

ಗಾಯಗೊಂಡವರನ್ನು ಬಿಹಾರ ಮೂಲದ ಕಾರ್ಮಿಕ ಸುರೇಂದ್ರ(55) ಎಂದು ಗುರುತಿಸಲಾಗಿದೆ.

ಮರಳುಗಾರಿಕೆಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ ಇವರು, ಕಲ್ಲೊಟ್ಟು ಸಂತೋಷ್ ಪೂಜಾರಿ ಅವರ ಮನೆಯ ಜಗಲಿಯಲ್ಲಿ ರಾತ್ರಿ ಮಲಗಿದ್ದ ವೇಳೆ ಚಿರತೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ ಎನ್ನಲಾಗಿದೆ.

ದೇಹದ ವಿವಿಧ ಭಾಗಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಚಿರತೆ ಸೆರೆ ಹಿಡಿಯಲು ಬೋನು ಇಡುವ ಸಿದ್ಧತೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು