Categories: ಉಡುಪಿ

ಉಡುಪಿ: ಕಸದ ರಾಶಿಗೆ ವ್ಯಕ್ತಿ ಎಸೆದ ಪ್ರಕರಣಕ್ಕೆ ಟ್ವಿಸ್ಟ್, ಇಬ್ಬರು ವಶಕ್ಕೆ

ಉಡುಪಿ:  ಟೆಂಪೋ ರಿಕ್ಷಾದಲ್ಲಿ ಮೃತದೇಹ ತಂದು ಕಸದರಾಶಿಯಲ್ಲಿ ಎಸೆದುಹೋದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೃತ ಕೂಲಿ ಕಾರ್ಮಿಕನ ಪತ್ನಿ ತನ್ನ ಪತಿಯ ಸಾವಿನಲ್ಲಿ ಸಂಶಯವಿದೆ ಎಂದು ಮಲ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಏನಿದು ಪ್ರಕರಣ.?: ಫೆ.16ರಂದು ಮಧ್ಯಾಹ್ನ ಟೆಂಪೋ ರಕ್ಷಾದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕೆಮ್ಮಣ್ಣು  ಸಂತೆ ಮಾರ್ಕೆಟ್ ಬಳಿ ಕಸದ ರಾಶಿಗೆ ವ್ಯಕ್ತಿಯೊಬ್ಬರನ್ನು ಎಸೆದು ಹೋಗಿದ್ದರು. ಆದರೆ ಆ ವ್ಯಕ್ತಿ ಬಳಿಕ ಮೃತಪಟ್ಟಿದ್ದನು.‌ ವ್ಯಕ್ತಿಯನ್ನು ಎಸೆದು ಹೋಗುವ ದೃಶ್ಯ ಅಲ್ಲೆ ಎದುರಿನ  ಮಳಿಗೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸಿಸಿಟಿವಿಯ‌ ದೃಶ್ಯ ವೈರಲ್ ಆಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿತ್ತು.
ಬಳಿಕ ಪೊಲೀಸರು ವ್ಯಕ್ತಿಯನ್ನು ಎಸೆದುಹೋದ ಬಸವರಾಜ್ ನಾಗಪ್ಪ ಹಳೆಮನೆ ಹಾಗೂ ಇನ್ನೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಗ ಮೃತ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿ ಹನುಮಂತಪ್ಪ (39) ಎಂದು ತಿಳಿದುಬಂದಿತ್ತು. ಈತ ಸಂತೆ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದು, ಗುರುವಾರ ಕೆಮ್ಮಣ್ಣು ಸಂತೆಗೆ ಪರಿಚಯದ ಬಸವರಾಜ್ ನಾಗಪ್ಪ ಹಳೆಮನೆ ಎಂಬಾತನೊಂದಿಗೆ ಬಂದಿದ್ದನು. ಆದರೆ, ಹನುಮಂತಪ್ಪನು ಎದೆನೋವು ಜ್ವರ ತಲೆನೋವು ಎಂದು ಹೇಳಿದ್ದು, ಆಗ ಬಸವರಾಜ್ ಜ್ವರದ ಮಾತ್ರೆ ಹಾಗೂ ಜಂಡು ಬಾಂಬ್ ತಂದು ಕೊಟ್ಟಿದ್ದನು.‌ ನಂತರ ಮಧ್ಯಾಹ್ನ ಸುಮಾರು 1.30 ಕ್ಕೆ ಬಸವರಾಜ್ ರಿಕ್ಷಾದ ಬಳಿ ಬಂದಾಗ ನೋಡಿದಾಗ ಹನುಮಂತಪ್ಪ ಮಲಗಿದ್ದು, ಎಷ್ಟೇ ಕರೆದು ಎಬ್ಬಿಸಿದರೂ ಏಳದೆ ಇದ್ದಾಗ ಮದ್ಯಪಾನ ಮಾಡಿ ಮಲಗಿರಬಹುದು ಎಂದು ಊಹಿಸಿ ಆತನನ್ನು ರಿಕ್ಷಾದಿಂದ ಕೆಳಗೆ ಇಳಿಸಿ ರಸ್ತೆಯ ಬದಿ ಮರದ ನೆರಳಿನಲ್ಲಿ ಮಲಗಿಸಿ ಹೋಗಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಬಸವರಾಜ್  ತಿಳಿಸಿದ್ದನು.

ಮೇಲ್ನೋಟಕ್ಕೆ ಪರಿಶೀಲನೆ ನಡೆಸಿದಾಗ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿರಲಿಲ್ಲ. ಕೊಲೆ ಎಂಬುದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಎಸ್ಪಿ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದರು.

ಪತಿಯ ಸಾವಿನಲ್ಲಿ ಸಂಶಯವಿದೆ: ಪತ್ನಿ ಮಂಜುಳಾ: ಉಡುಪಿಗೆ ಆಗಮಿಸಿರುವ ಮೃತ ಹನುಮಂತಪ್ಪನ ಪತ್ನಿ ಮಂಜುಳಾ ಅವರು ನನ್ನ ಪತಿಯ ಸಾವಿನಲ್ಲಿ ಸಂಶಯವಿದೆ. ಹಾಗಾಗಿ ಸೂಕ್ತ ತನಿಖೆ‌ ನಡೆಸುವಂತೆ ಆಗ್ರಹಿಸಿ ದೂರು ನೀಡಿದ್ಧಾರೆ. ಅದರ ಆಧಾರದಲ್ಲಿ ತನಿಖೆ ಮುಂದುವರಿದಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Umesha HS

Recent Posts

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

16 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

17 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

32 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

35 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

59 mins ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

1 hour ago