ಮಣಿಪಾಲ: ಡಿವೈಡರ್ ಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪರ್ಕಳ ರಾಷ್ಟ್ರೀಯ ಹೆದ್ದಾರಿ 169 (ಎ)ರಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಮೃತ ಸವಾರನನ್ನು ಹಿರಿಯಡಕ ನಿವಾಸಿ ಅಕ್ಷಯ ಭಟ್ (26) ಎಂದು ಗುರುತಿಸಲಾಗಿದೆ. ಇವರು ಅವಿವಾಹಿತರಾಗಿದ್ದು, ಅಡಿಗೆ ವೃತ್ತಿ ಮಾಡಿಕೊಂಡಿದ್ದರು. ಇಂದ್ರಾಳಿಯ ದೇವಸ್ಥಾನವೊಂದರಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆ ಅಡಿಗೆ ಕೆಲಸ ನಿರ್ವಹಿಸಲು ಮನೆಯಿಂದ ತೆರಳುವ ಈ ದುರ್ಘಟನೆ ನಡೆದಿದೆ.
ಮಣಿಪಾಲ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಶವವನ್ನು ಕೆ.ಎಂಸಿಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ನೆರವಾದರು.