ಉಡುಪಿ: ಮಣಿಪಾಲ ವಿದ್ಯಾನಗರದ ಬಾರ್ ವೊಂದರಲ್ಲಿ ಅನುಮತಿಯಿಲ್ಲದೆ ಹುಕ್ಕಾ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ಗಳಲ್ಲಿ ತಡರಾತ್ರಿ ಪಾರ್ಟಿಯ ಚಿತ್ರಗಳನ್ನು ಪೋಸ್ಟ್ ಮಾಡಿದ್ದರು. ಈ ವೇಳೆ ಅನುಮತಿಯಿಲ್ಲದೆ ಹುಕ್ಕಾ ಪಾರ್ಟಿ ಮಾಡುತ್ತಿದ್ದ ಬಾರ್ ಮೇಲೆ ಗಸ್ತು ತಿರುಗುತ್ತಿದ್ದ ಪೊಲೀಸರು ದಾಳಿ ನಡೆಸಿದ್ದಾರೆ.
ಮಣಿಪಾಲ ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ. ಡಿಜೆ ಪಾರ್ಟಿಗೆ ಅನುಮತಿ ನೀಡಿದ್ದಕ್ಕಾಗಿ ಬಾರ್ ಮಾಲೀಕನ ಮೇಲೆ ಕೇಸ್ ಹಾಕಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.