ಮಣಿಪಾಲ: ನೇತ್ರದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಅದಕ್ಕೆ ಸಂಬಂಧಿಸಿದ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ ಉದ್ದೇಶದಿಂದ ಆಗಸ್ಟ್ 25 ಮತ್ತು ಸೆಪ್ಟೆಂಬರ್ 8ರವರೆಗೆ ರಾಷ್ಟ್ರೀಯ ನೇತ್ರದಾನ ಪಾಕ್ಷಿಕವನ್ನು ಆಚರಿಸಲಾಗುತ್ತಿದೆ.
ರಾಷ್ಟ್ರೀಯ ನೇತ್ರದಾನ ಪಾಕ್ಷಿಕದ ಪ್ರಯುಕ್ತ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮತ್ತು ಮಣಿಪಾಲ್ ಸ್ಕೂಲ್ ಆಫ್ ಇನ್ಫರ್ಮೇಷನ್ ಸೈನ್ಸ್, ಸಕ್ಷಮ – ಕರ್ನಾಟಕ, ನೇತ್ರಶಾಸ್ತ್ರ ವಿಭಾಗ, ಕಸ್ತೂರ್ಬಾ ಆಸ್ಪತ್ರೆ ಮತ್ತು ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ಸಹಭಾಗಿತ್ವದಲ್ಲಿ ಸೈಟ್-ಎ-ಥಾನ್ 2023 ಅನ್ನು ಆಯೋಜಿಸಿದೆ. ಇದರ ಅಂಗವಾಗಿ ಸಾರ್ವಜನಿಕರಲ್ಲಿ ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಡಿಗೆ ಎಂಬ ಜಾಥವನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿತ್ತು.