ಕುಂದಾಪುರ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವಾಮಿ ಅವರ ಆಪ್ತರಾದ ಸಮಾಜ ಸೇವಕ ಮನ್ಸೂರ್ ಇಬ್ರಾಹಿಂ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ದೊರೆತಿದೆ.
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರ ಜತೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಮನ್ಸೂರ್ ಇಬ್ರಾಹಿಂ ಸ್ಪರ್ಧೆ ಮಾಡಲಿದ್ದಾರೆ.
ಬೈಂದೂರು ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದ್ದು ಮೂರು ಪಕ್ಷಗಳ ನಡುವೆ ಪೈಪೋಟಿ ನಡೆಯಲಿದೆ.