News Karnataka Kannada
Monday, April 29 2024
ಉಡುಪಿ

ಕಾಪು ವಿಧಾನಸಭಾ ಕ್ಷೇತ್ರ ಢಶಾಲಾ ಮಕ್ಕಳಿಗೆ ಯಕ್ಷಗಾನ ತರಬೇತಿ ಪೂರ್ವಭಾವಿ ಸಭೆ

Meeting on imparting Yakshagana training to high school children of Kapu Assembly constituency
Photo Credit : News Kannada

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಖಾಸಗಿ ಪ್ರೌಢಶಾಲಾ ಮಕ್ಕಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ಕರಾವಳಿಯ ಗಂಡು ಕಲೆ ಎಂದೆ ಪ್ರಸಿದ್ಧಿ ಪಡೆದ ಯಕ್ಷಗಾನ ಕಲೆಯನ್ನು ಕಲಿಸುವ ನಿಟ್ಟಿನಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಶಾಸಕರ ಕಚೇರಿಯಲ್ಲಿ ಯಕ್ಷಗಾನ ಕಲಾರಂಗ ಪದಾಧಿಕಾರಿಗಳೊಂದಿಗೆ ಮತ್ತು ಶಾಲಾ ಮುಖ್ಯೋಪಾಧ್ಯಾಯರೊಂದಿಗೆ  ಶನಿವಾರ ಸಭೆ ನಡೆಸಿ ಚರ್ಚಿಸಿದರು.

ಮಕ್ಕಳಿಗೆ ಯಕ್ಷಗಾನ ಕಲಿಸುವುದರಿಂದ ಮಕ್ಕಳ ನೈತಿಕ ಮೌಲ್ಯ ಹಾಗೂ ಜ್ಞಾನ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್, ಉಪಾಧ್ಯಕ್ಷ ವಿ.ಜಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಜೊತೆ ಕಾರ್ಯದರ್ಶಿ ನಾರಾಯಣ ಎಂ. ಹೆಗ್ಡೆ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು