Categories: ಉಡುಪಿ

ಕುಂತಳನಗರದಲ್ಲಿ ನ.18, 19ರಂದು ಬೃಹತ್ ಉದ್ಯೋಗ ಮೇಳ

ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ನವೆಂಬರ್ 18 ಮತ್ತು 19ರಂದು 2 ದಿನಗಳ ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಹೇಳಿದರು.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉದ್ಯೋಗ ಮೇಳವನ್ನು ಎಂ. ಆರ್. ಜಿ. ಗ್ರೂಪ್ ನ ಪ್ರಾಯೋಜಕತ್ವದಲ್ಲಿ ಆಯೋಜಿಸಲಾಗಿದೆ. ನ.18ರಂದು ಬೆಳಿಗ್ಗೆ ಎಂ. ಆರ್. ಜಿ ಗ್ರೂಪ್ ನ ಛೇರ್ಮನ್ ಕೆ. ಪ್ರಕಾಶ್ ಶೆಟ್ಟಿ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದಾರೆ.

ಅಂದು ಬೆಳಿಗ್ಗೆ 9 ಗಂಟೆಯಿಂದ ಕುಂತಳನಗರದ ಗ್ರಾಮೀಣ ಬಂಟರ ಸಂಘದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸೆಂಟರ್ ಹಾಗೂ ಚಾರಿಟೇಬಲ್ ಟ್ರಸ್ಟ್ ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಅಭ್ಯರ್ಥಿಗಳು ನೋಂದಣಿ ಮಾಡಬೇಕು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬೇಕು ಎಂದರು.

ಅಂತಿಮ ವರ್ಷದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಸಹ ಭಾಗವಹಿಸಬಹುದು. ಕಳೆದ ವರ್ಷದ ಉದ್ಯೋಗ ಮೇಳದಲ್ಲಿ ಸುಮಾರು 450 ಅಭ್ಯರ್ಥಿಗಳಿಗೆ ಉದ್ಯೋಗ ಸಿಕ್ಕಿದೆ ಎಂದು ಹೇಳಿದರು.

ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನ ಪ್ರೋಗ್ರಾಮ್ ಡೈರೆಕ್ಟರ್ ಪ್ರೊ. ದಿವ್ಯ ರಾಣಿ ಮಾತನಾಡಿ, ಮೇಳದಲ್ಲಿ ಒಟ್ಟು 25 ಕಾರ್ಪೊರೇಟ್ ಕಂಪನಿಗಳು ಭಾಗವಹಿಸಲಿವೆ. ಸುಮಾರು 1500 ಉದ್ಯೋಗವಕಾಶಗಳಿದ್ದು, ಇಂಜಿನಿಯರಿಂಗ್, ಎಂಬಿಎ ( ಮ್ಯಾನೇಜೆಂಟ್ ), ಡಿಪ್ಲೊಮೊ, ಐಟಿಐ, ಡಿಗ್ರಿ, ಸಿಎ ಹಾಗೂ ಪಿಯುಸಿ ಕಲಿತ ಉದ್ಯೋಗಕಾಂಕ್ಷಿಗಳಿಗೆ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶವಿದೆ. ಒಂದು ಅಭ್ಯರ್ಥಿ 5 ಕಂಪನಿಯ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ಕೋಶಾಧಿಕಾರಿ ವಿಜಿತ್ ಶೆಟ್ಟಿ, ಪದ್ಮನಾಭ ಹೆಗ್ಡೆ, ಹರೀಶ್ ಶೆಟ್ಟಿ ಬೆಳ್ಳೆ, ರಮೇಶ್ ಶೆಟ್ಟಿ ನಿಂಜೂರು, ಹರೀಂದ್ರ ಹೆಗ್ಡೆ ಕೊರಂಗ್ರಪಾಡಿ ಉಪಸ್ಥಿತರಿದ್ದರು.

Ashika S

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

1 hour ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

2 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago