News Karnataka Kannada
Saturday, May 04 2024
ಉಡುಪಿ

ಪುತ್ತಿಗೆ ಪರ್ಯಾಯೋತ್ಸವಕ್ಕೆ ಸಂಪೂರ್ಣ ಸಹಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

Minister Laxmi Hebbalkar assures full cooperation for Puthige Parathotsava
Photo Credit : News Kannada

ಉಡುಪಿ: ಮುಂದಿನ ಜನವರಿಯಲ್ಲಿ ನಡೆಯಲಿರುವ ಶ್ರೀ ಪುತ್ತಿಗೆ ಪರ್ಯಾಯೋತ್ಸವಕ್ಕೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಪೂರ್ಣ ಪ್ರಮಾಣದ ಸಹಕಾರ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು.

ಉಡುಪಿ ಪುತ್ತಿಗೆ ಮಠದಲ್ಲಿ ಬುಧವಾರ ನಡೆದ ಪರ್ಯಾಯೋತ್ಸವ ಪೂರ್ವಭಾವಿ ಸಭೆಯಲ್ಲಿ ಅವರು‌ ಮಾತನಾಡಿದರು.
ಮುಂದಿನ ಉಡುಪಿ ಭೇಟಿ ವೇಳೆ ಜಿಲ್ಲಾಡಳಿತದ ವತಿಯಿಂದ ಪರ್ಯಾಯೋತ್ಸವ ಸಂಬಂಧ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗುವುದು ಎಂದರು.

ಪುತ್ತಿಗೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಶ್ರೀ ಕೃಷ್ಣ ಪರಮಾತ್ಮ ನನಗೆ ಕರುಣಿಸಿದ್ದಾನೆ. ಪುತ್ತಿಗೆ ಮಠ ದೇಶ, ವಿದೇಶಗಳಲ್ಲೂ ಪ್ರಸಿದ್ಧಿ ಪಡೆದಿದೆ. ಹಿಂದೂ‌ ಸಂಸ್ಕೃತಿ ಶ್ರೇಷ್ಠ ಸಂಸ್ಕೃತಿ, ಇದನ್ನು ಉಳಿಸಿ, ಬೆಳಸುವ ಕರ್ತವ್ಯ ನಮ್ಮದು. ನಮ್ಮ ಸಂಸ್ಕೃತಿಯನ್ನು ಪುತ್ತಿಗೆ ಶ್ರೀಗಳು ವಿದೇಶಿ ನೆಲದಲ್ಲಿ ಪಸರಿಸುತ್ತಿದ್ದಾರೆ ಎಂದು ಸಚಿವೆ ಹೇಳಿದರು.

ಯಾವುದೇ ರಾಜಕೀಯ ತರದೇ ಭಕ್ತಿಭಾವದಿಂದ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳೋಣ. ದೇಶ ವಿದೇಶಗಳಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಸಕಲ ವ್ಯವಸ್ಥೆಯನ್ನು ಮಾಡೋಣ ಎಂದರು. ಪುತ್ತಿಗೆ ಪರ್ಯಾಯ ಸಮಿತಿ ಮಹಾ ಪೋಷಕರನ್ನಾಗಿ ನನ್ನನ್ನು ನೇಮಿಸಿದ್ದು, ಈ ಹುದ್ದೆಗೆ ತಕ್ಕಂತೆ ಕಾರ್ಯನಿರ್ವಹಿಸುವೆ ಎಂದರು.

ಈ ಸಂದರ್ಭದಲ್ಲಿ ಉಡುಪಿಯ ಶ್ರೀಕೃಷ್ಣ ಮಠದ ಶ್ರೀ ಪುತ್ತಿಗೆ ಪರ್ಯಾಯ ಸಮಿತಿಯ ಮಹಾ ಪೋಷಕರಾಗಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರನ್ನು ನೇಮಿಸಲಾಯಿತು.

ಪುತ್ತಿಗೆ ಮಠದ ದಿವಾನರಾದ ನಾಗರಾಜ್ ಆಚಾರ್ಯ, ಪರ್ಯಾಯ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಹಾಗು ಮಾಜಿ ಶಾಸಕ ರಘುಪತಿ ಭಟ್, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಸ್ವಾಗತ ಸಮಿತಿಯ ಕೋಶಾಧಿಕಾರಿ ರಂಜನ್ ಕಲ್ಕೂರ ಹಾಗೂ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು