News Karnataka Kannada
Monday, April 29 2024
ಉಡುಪಿ

ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಮಿಸ್‌ ಫೈರಿಂಗ್‌: ಓರ್ವ ಸಿಬ್ಬಂದಿಗೆ ಗಾಯ

Misfiring at Jayalakshmi Silk: One staff member injured
Photo Credit : News Kannada

ಉಡುಪಿ: ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಇಂದು ಮಧ್ಯಾಹ್ನ ಮಿಸ್‌ ಫೈರಿಂಗ್‌ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ.

ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್‌ ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್‌ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್‌ ವಶಕ್ಕೆ ಪಡೆದುಕೊಂಡಿದ್ದಾರೆ. ಗನ್‌ ಯಾರದ್ದು? ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಅನ್ನೋದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆ ಭೂಗತ ಪಾತಕಿಗಳಿಂದ ಜಯಲಕ್ಷ್ಮೀ ಸಿಲ್ಕ್ಸ್‌ನಲ್ಲಿ ಫೈರಿಂಗ್‌ ಕೂಡ ನಡೆದಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು