ಉಡುಪಿ: ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ “ವಿಕಸಿತ ಭಾರತ ಸಂಕಲ್ಪ ಯಾತ್ರೆ”ಗೆ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಬಳಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಶಾಸಕರು ಫಲಾನುಭವಿಗಳಿಗೆ ಉಜ್ವಲ ಯೋಜನೆ ಅಡಿಯಲ್ಲಿ ಮಂಜೂರಾದ ಉಚಿತ ಗ್ಯಾಸ್ ಸಂಪರ್ಕವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷ ಹರೀಶ್ ಸಾಲಿಯಾನ್, ಕೆನರಾ ಬ್ಯಾಂಕ್ ನ ಹಿರಿಯಡಕ ಶಾಖೆಯ ಪ್ರಬಂಧಕ ಅವಿನಾಶ್ ಕಿಣಿ ಉಪಸ್ಥಿತರಿದ್ದರು.