Categories: ಉಡುಪಿ

ಖಾಸಗಿ ಬಸ್‌ಗಳಲ್ಲಿಯೂ ಉಚಿತ ಪ್ರಯಾಣ ಅವಕಾಶ ಒದಗಿಸಿ ಶಾಸಕ ಸುನೀಲ್‌ ಒತ್ತಾಯ

ಕಾರ್ಕಳ: ಖಾಸಗಿ ಬಸ್​ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ ಎಂದು ಮಾಜಿ ಸಚಿವ ಸುನೀಲ್‌ ಕುಮಾರ್‌ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕಾಂಗ್ರೆಸ್ ಪಕ್ಷವು ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿ ನೀಡಿದೆ. ಆದರೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಹೆಚ್ಚಾಗಿ ಖಾಸಗಿ ಬಸ್​ಗಳನ್ನು ಅವಲಂಬಿಸಿರುವುದರಿಂದ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್​ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಟ್ವೀಟ್‌ ಮಾಡಿದ್ದಾರೆ.

Gayathri SG

Recent Posts

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

11 mins ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

24 mins ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

35 mins ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

47 mins ago

ಲೋಕಸಭಾ ಚುನಾವಣೆ: ಬಿಜೆಪಿ ಒಂದಂಕಿ ದಾಟಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಲೋಕಸಭಾ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಬಿಜೆಪಿ ಈ ಸಲ ಒಂದಂಕಿ ಸಂಖ್ಯೆ‌ ದಾಟುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

57 mins ago

4 ದಿನ ಎಸ್‌ಐಟಿ ಕಸ್ಟಡಿಗೆ ಹೆಚ್‌.ಡಿ.ರೇವಣ್ಣ: ನ್ಯಾಯಾಲಯ ಆದೇಶ

ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರನ್ನು 4 ದಿನ ಎಸ್‌ಐಟಿ  ವಶಕ್ಕೆ…

1 hour ago