ಉಡುಪಿ: ಉಡುಪಿ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರದ ರಸ್ತೆ, ಮೂಲ ಸೌಕರ್ಯ ಅಭಿವೃದ್ಧಿ ಸಹಿತ ವಿವಿಧ ಕಾಮಗಾರಿಗಳಿಗೆ 50 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಉಡುಪಿ ಜಿಲ್ಲೆಯ ಮಳೆ ಹಾನಿ ಕಾಮಗಾರಿಗೆ ಅನುದಾನ ಬಿಡುಗಡೆ, ಕೂಸಮ್ಮ ಶಂಭು ಶೆೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲ ತಾಯಿ ಮಕ್ಕಳ ಆಸ್ಪತ್ರೆ ನಿರ್ವಹಣೆಗೆ ಅನುದಾನ, ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ವಿಭಾಗದ ಅವ್ಯವಸ್ಥೆ ಸರಿಪಡಿಸಲು ಕ್ರಮ, ಸರಕಾರಿ ಮೆಡಿಕಲ್ ಕಾಲೇಜು ಮಂಜೂರು, ಮಣಿಪಾಲದಲ್ಲಿ ನೂತನ ಅಗ್ನಿಶಾಮಕ ಠಾಣೆ ನಿರ್ಮಾಣ, ಮೀನುಗಾರಿಕೆ ಅಭಿವೃದ್ದಿ ಯೋಜನೆಗಳಿಗೆ ವಿಶೇಷ ಒತ್ತು ಸಹಿತ ವಿವಿಧ ಬೇಡಿಕೆಗಳ ಬಗ್ಗೆ ತಕ್ಷಣ ಸ್ಪಂದಿಸುವಂತೆ ಮುಖ್ಯಮಂತ್ರಿಗಳಿಗೆ
ಮನವಿ ಮಾಡಿದರು.
ಈ ಬಾರಿಯ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಯಶ್ ಪಾಲ್ ಸುವರ್ಣ ಆಹ್ವಾನಿಸಿದರು.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…