News Karnataka Kannada
Monday, April 29 2024
ಉಡುಪಿ

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರಿನ ತನಕ ವಿಸ್ತರಿಸಲು ಶಾಸಕ ಯಶಪಾಲ್ ಸುವರ್ಣ ಮನವಿ

Mla Yashpal Suvarna seeks extension of Vande Bharat Express train up to Mangaluru
Photo Credit : News Kannada

ಉಡುಪಿ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು.

ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದ್ದಲ್ಲಿ ಈ ಉಡುಪಿ ಹಾಗೂ ಮಂಗಳೂರಿನ ಪ್ರಯಾಣಿಕರಿಗೆ ಇದರ ಪ್ರಯೋಜನ ಲಭಿಸಲಿದೆ.

ಅಲ್ಲದೆ ಕಾರವಾರ ದಿಂದ ತಿರುಪತಿ ವಂದೇ ಭಾರತ್ ರೈಲನ್ನು ಬೆಂಗಳೂರು ಮಾರ್ಗವಾಗಿ ಹೊಸದಾಗಿ ರೈಲ್ವೆ ಆರಂಭ ಮಾಡಿದ್ದಲ್ಲಿ ಕರಾವಳಿ ಜಿಲ್ಲೆಗಳ ಹೆಚ್ಚಿನ ಉದ್ಯಮಗಳಿಗೆ ಹಾಗೂ ಮೀನುಗಾರರಿಗೆ, ಪ್ರವಾಸಿಗರಿಗೆ, ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದೆ.

ಡಿಸೆಂಬರ್ ತಿಂಗಳಿನಿಂದ ಜನವರಿ ಅಂತ್ಯದ ವರೆಗೆ ಉಡುಪಿ ಮಂಗಳೂರಿನಿಂದ ತೆರಳುವ ಶಬರಿಮಲೆ ಯಾತ್ರಾರ್ಥಿಗಳಿಗೆ ವಿಶೇಷ ರೈಲಿನ ವ್ಯವಸ್ಥೆ ಮಾಡುವಂತೆ ಕೂಡ ಮನವಿ ಮಾಡಿದ್ದಾರೆ.

ಶಾಸಕರ ಮನವಿಯನ್ನು ಸ್ವೀಕರಿಸಿದ ಸಚಿವೆ ಅದನ್ನು ಕೇಂದ್ರ ರೈಲ್ವೆ ಸಚಿವರಿಗೆ ತಲುಪಿಸುವುದಾಗಿ ಮತ್ತು ಸೂಕ್ತ ಕ್ರಮಕ್ಕೆ ಒತ್ತಾಯಿಸುವುದಾಗಿ ಭರವಸೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು