News Karnataka Kannada
Sunday, May 05 2024
ಉಡುಪಿ

ಉಡುಪಿ: ಪ್ರೊ. ಕಬಡ್ಡಿ ಪಂದ್ಯಾವಳಿ “ಅಟಲ್ ಟ್ರೋಫಿ – 2022ಕ್ಕೆ ಕೇಂದ್ರ ಕ್ರೀಡಾ ಸಚಿವರಿಂದ ಚಾಲನೆ

Udupi (1)
Photo Credit : News Kannada

ಉಡುಪಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಅಂಗವಾಗಿ ಬಿಜೆಪಿ ಉಡುಪಿ ನಗರ ಮತ್ತು ಗ್ರಾಮಾಂತರ ಇದರ ವತಿಯಿಂದ ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ಎಂ.ಜಿ.ಎಂ ಮೈದಾನದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಹೊನಲು ಬೆಳಕಿನ ಪ್ರೊ. ಕಬಡ್ಡಿ ಪಂದ್ಯಾವಳಿ “ಅಟಲ್ ಟ್ರೋಫಿ – 2022″ಕ್ಕೆ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ, ಯುವ ವ್ಯವಹಾರಗಳು ಮತ್ತು ಕೀಡಾ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಚಾಲನೆ ನೀಡಿದರು.

ರಾಜ್ಯ ಕ್ರೀಡಾ ಸಚಿವ ಡಾ. ನಾರಾಯಣಗೌಡ ಕಬಡ್ಡಿ ಕೋರ್ಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಕೆ. ರಘುಪತಿ ಭಟ್, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷ ಶ್ರೀಶ ನಾಯಕ್, ರಾಜ್ಯ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಕಾರ್ಯಕ್ರಮದ ಸಂಚಾಲಕರಾದ ರಾಘವೇಂದ್ರ ಕಿಣಿ, ಗಿರೀಶ್ ಅಂಚನ್, ಉಮೇಶ್ ನಾಯ್ಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು