News Karnataka Kannada
Friday, May 03 2024
ಉಡುಪಿ

ಕಾರ್ಮಿಕ ಮಕ್ಕಳ ವಿದ್ಯಾರ್ಥಿ ವೇತನದಲ್ಲಿ ಕಡಿತ ಮಾಡಿಲ್ಲ: ಸಚಿವ ಲಾಡ್ ಸ್ಪಷ್ಟನೆ

No cut in scholarships for working children: Lad
Photo Credit : News Kannada

ಉಡುಪಿ: ಕಾರ್ಮಿಕ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನದಲ್ಲಿ ನಾವು ಯಾವುದೇ ಕಡಿತ ಮಾಡಿಲ್ಲ. ಹಲವು ನಕಲಿ ಕಾರ್ಡ್ ಗಳಿರುವುದು ಗಮನಕ್ಕೆ ಬಂದಿದ್ದು, ಎಲ್ಲ ಅರ್ಜಿಗಳನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ ವಿದ್ಯಾರ್ಥಿ ವೇತನ ನೀಡುತ್ತಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಅವರು, ಈ ಬಾರಿ 13 ಲಕ್ಷ ಅರ್ಜಿಗಳು ಬಂದಿದ್ದು, ಎಲ್ಲ ಅರ್ಜಿಗಳನ್ನು ಪರಿಶೀಲಿಸಿ 9 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇವೆ ಎಂದರು.

2021ರಲ್ಲಿ 2,000 ಇದ್ದ ವಿದ್ಯಾರ್ಥಿ ವೇತನವನ್ನೂ ಏಕಾಏಕಿಯಾಗಿ ಎಂಟು ಸಾವಿರಕ್ಕೆ ಏರಿಸಿದರು. 10 ಸಾವಿರ ನೀಡುವವರಿಗೆ 30 ಸಾವಿರ ಕೊಟ್ಟರು. ಮೂವತ್ತು ಸಾವಿರ ಕೊಡುವವರಿಗೆ ಒಂದು ಲಕ್ಷ ರುಪಾಯಿ ಕೊಟ್ಟರು. ಇದು ಅವೈಜ್ಞಾನಿಕ ಕ್ರಮವಾಗಿತ್ತು. ಹೀಗಾಗಿ ಕಳೆದ ಮೂರು ವರ್ಷಗಳಲ್ಲಿ ಏಕಾಏಕಿ 39 ಲಕ್ಷ ಕಾರ್ಡ್ ಗಳ ಬೇಡಿಕೆ ಬಂದಿದೆ ಎಂದರು.

ಹಾವೇರಿ ಜಿಲ್ಲೆಯೊಂದರಲ್ಲೇ ಮೂರು ಲಕ್ಷ ಕಾರ್ಡುಗಳಿವೆ. ಇದರಲ್ಲಿ ಅನೇಕ ನಕಲಿ ಕಾರ್ಡುಗಳಿವೆ. ವೈಜ್ಞಾನಿಕ ರೀತಿಯಲ್ಲಿ ಈ ಸಮಸ್ಯೆ ನಿರ್ವಹಿಸುತ್ತೇವೆ ಎಂದು ಸಷ್ಟನೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು