ಉಡುಪಿ

ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ: ಶಾಸಕ ಕೆ. ರಘುಪತಿ ಭಟ್ ಬೇಸರ

ಉಡುಪಿ: ನಾನು ಪಕ್ಷದ ನಿಷ್ಟಾವಂತ ಕಾರ್ಯಕರ್ತ. ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಕೂಡ ಸ್ಪರ್ಧೆ ಮಾಡಲ್ಲ. ಟಿಕೆಟ್ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಿಲ್ಲ. ಆದರೆ ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ. ಅದೇ ಶಾಕ್‌ನಲ್ಲಿದ್ದೇನೆ ಎಂದು ಶಾಸಕ ಕೆ. ರಘುಪತಿ ಭಟ್ ಕಣ್ಣೀರು ಹಾಕಿದರು.

ಶಾಸಕ ಕೆ. ರಘುಪತಿ ಭಟ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇಂದು ಶಾಸಕರ ಮನೆಯ ಮುಂದೆ ನೂರಾರು ಸಂಖ್ಯೆಯ ಕಾರ್ಯಕರ್ತರು ಜಮಾಯಿಸಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವ ಕಾರ್ಯಕರ್ತರನ್ನು ದಾರಿ ಮಧ್ಯೆ ಬಿಡಲ್ಲ. ರೆಡ್ಡಿ ಪಕ್ಷಕ್ಕೆ ಹೋಗುತ್ತೇನೆ ಎನ್ನುವುದು ಸೀಟ್ ಗಿಟ್ಟಿಸಿಕೊಳ್ಳುವವರು ಮಾಡುವ ಹುನ್ನಾರ ಎಂದರು.

ನನಗೆ ಟಿಕೆಟ್ ಸಿಗಲ್ಲ ಎನ್ನುವ ಬಗ್ಗೆ ಕನಸು ಮನಸ್ಸಿನಲ್ಲಿ ಊಹೆ ಮಾಡಿರಲಿಲ್ಲ. ಜಾತಿಯ ಕಾರಣಕ್ಕೆ ಬದಲಾವಣೆ ಮಾಡುತ್ತಾರೆ ಎನ್ನುವ ಆಲೋಚನೆ ಇರಲಿಲ್ಲ. ಪಕ್ಷದ ನಾಯಕತ್ವ, ಮೋದಿಯ ಬಗ್ಗೆ ಬೇಸರವಿಲ್ಲ. ನಾನು ಪಾರ್ಟಿಗೆ ಇಷ್ಟರ ಮಟ್ಟಿಗೆ  ಬೇಡವಾದೆನೇ? ನನಗೆ ಟಿಕೆಟ್ ಇಲ್ಲ ಎನ್ನುವುದನ್ನು ಮಾಧ್ಯಮದಲ್ಲಿ‌ ನೋಡಿ ತಿಳಿದುಕೊಳ್ಳಬೇಕೇ? ನನ್ನನ್ನು ಕೇಳಿ ಮಾಡುತ್ತಿದ್ದರೆ ನಾನೇ ರಾಜೀನಾಮೆ ಕೊಡುತ್ತಿದ್ದೆ ಎಂದು ನೋವು ತೋಡಿಕೊಂಡರು.

ನಾನೊಬ್ಬ ಸಣ್ಣ ವ್ಯಕ್ತಿ. ನನಗೆ ಜಾತಿ ಇಲ್ಲ. 3 ಬಾರಿ ಶಾಸಕನಾದೆ. ನಾನೇ ಶಾಶ್ವತ ಅಭ್ಯರ್ಥಿ ಅಲ್ಲ ಎನ್ನುವುದು ನನಗೂ ಗೊತ್ತಿದೆ. ಸದ್ಯದ ಸ್ಥಿತಿಯಲ್ಲಿ ಸಾಮಾನ್ಯ ಕಾರ್ಯಕರ್ತ ನಿಂತರೂ ಪಕ್ಷ ಗೆಲ್ಲುವ ಸ್ಥಿತಿಯಲ್ಲಿದೆ. ಇದಕ್ಕೆ ನನ್ನ ಶ್ರಮ ಬಹಳಷ್ಟಿದೆ ಎಂದರು.
ಯಾವೊಬ್ಬ ನಾಯಕರೂ ನನಗೆ ಕಾಲ್ ಮಾಡಿ ಮಾತನಾಡಿಲ್ಲ. ನನ್ನ ಅವಶ್ಯಕತೆ ಪಕ್ಷಕ್ಕೆ ಇಲ್ಲವೇ ಎಂದು ಭಾವುಕರಾದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago