News Karnataka Kannada
Monday, May 06 2024
ಉಡುಪಿ

ಪಾಂಗಾಳ: ಚೂರಿಯಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

Man stabbed to death
Photo Credit : News Kannada

ಪಾಂಗಾಳ: ಚೂರಿಯಿಂದ ಇರಿದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಾಪು ತಾಲೂಕಿನ ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಬಳಿ ಇಂದು ಸಂಜೆ ನಡೆದಿದೆ.

ಕೊಲೆಯಾದ ಯುವಕನನ್ನು ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಎಂದು ಗುರುತಿಸಲಾಗಿದೆ.

ಇಬ್ಬರು ದುಷ್ಕರ್ಮಿಗಳಿಂದ ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಶರತ್ ಶೆಟ್ಟಿ ಭೂ ವ್ಯವಹಾರ ಮಾಡಿತ್ತಿದ್ದು, ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ‌ ಬಿದ್ದಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ‌. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಶರತ್ ಶೆಟ್ಟಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು