Categories: ಉಡುಪಿ

ಪರಶುರಾಮ ಥೀಮ್ ಪಾರ್ಕ್ ಗೋಮಾಳ ಜಾಗಕ್ಕೆ ಸೇರಿದ್ದು, ಅಲ್ಲಿರುವ ಪ್ರತಿಮೆ ಕೂಡ ಫೇಕ್: ಮುತಾಲಿಕ್

ಉಡುಪಿ: ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಶುರುವಾಗಿರುವ ಪರಶುರಾಮ ಪ್ರತಿಮೆ ಅಸಲಿಯೋ ಅಥವಾ ನಕಲಿಯೋ ಕುರಿತ ಚರ್ಚೆಗೆ ಪ್ರತಿಕ್ರಿಯೆ ನೀಡಿರುವ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು, ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಗೋಮಾಳ ಜಾಗಕ್ಕೆ ಸೇರಿದ್ದು, ಅಲ್ಲಿ ನಿರ್ಮಿಸಿರುವ ಪಾರ್ಕ್ ಕೂಡ ಅಕ್ರಮ. ಅಲ್ಲದೆ, ಅಲ್ಲಿ ಪ್ರತಿಷ್ಠಾಪಿಸಿರುವ ಪ್ರತಿಮೆ ಕೂಡ ಫೇಕ್ ಎಂದು ಕಿಡಿಕಾರಿದ್ದಾರೆ.

ಕಾರ್ಕಳ ಶಾಸಕರು ಅಭಿವೃದ್ಧಿಗಾಗಿ ಪ್ರತಿಮೆ ನಿರ್ಮಾಣ ಮಾಡಿದ್ದೇನೆ ಎಂದು ಹೇಳುತ್ತಾರೆ. ಆದರೆ, ಅಕ್ರಮವಾಗಿ ಪ್ರತಿಮೆ ನಿರ್ಮಾಣ ಮಾಡಿದರೆ ಅಭಿವೃದ್ಧಿ ಹೇಗಾಗುತ್ತದೆ? ಅಭಿವೃದ್ಧಿ ಎಂದರೆ ಜನರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಅನ್ನ ಮತ್ತು ಸೂರು ನೀಡುವುದಾಗಿದೆ ಎಂದರು.

ಅದು ಬಿಟ್ಟು ಕಂದಾಯ ಇಲಾಖೆ ಸಹಿತ ಎಲ್ಲ ಇಲಾಖೆಗಳು ಅನುಮತಿ ನೀಡದೇ ಇದ್ದರೂ ಪಾರ್ಕ್‌ ನಿರ್ಮಾಣ ಮಾಡಿರುವುದು ಅಭಿವೃದ್ಧಿ ಎನಿಸಿಕೊಳ್ಳುವುದಿಲ್ಲ. ಭ್ರಷ್ಟಾಚಾರದ ವಿರುದ್ಧ ಎಂದು ಹೇಳುತ್ತಿರುವ ಕಾಂಗ್ರೆಸ್ ಸರ್ಕಾರ ಇದರ ಬಗ್ಗೆ ತನಿಖೆ ನಡೆಸುವ ನೈತಿಕತೆ ಹೊಂದಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

Gayathri SG

Recent Posts

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

11 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

22 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

42 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

1 hour ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

2 hours ago