Categories: ಉಡುಪಿ

ಸ್ಥಳೀಯಾಡಳಿತ ಮೂಲಕವೇ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಿ- ಯಶ್ ಪಾಲ್ ಸುವರ್ಣ

ಉಡುಪಿ: ಜನ ಸಾಮಾನ್ಯರ ಸ್ಥಳೀಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ಪರಿಹಾರ ಒದಗಿಸಲು ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು.

ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ  ಯಶ್ ಪಾಲ್ ಸುವರ್ಣ ರವರು ಹಂದಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಬ್ರಹ್ಮಾವರ ತಾಲೂಕಿನ ಜನ ಸಾಮಾನ್ಯರ ಬೇಡಿಕೆಗಳಾದ ರೇಶನ್ ಕಾರ್ಡ್, ತ್ಯಾಜ್ಯ ಸಂಸ್ಕರಣಾ ಘಟಕ, ಹಕ್ಕುಪತ್ರ, ಮಳೆಗಾಲದ ಪೂರ್ವ ಸಿದ್ಧತೆ , ಗ್ರಾಮ ಪಂಚಾಯತ್ ಮಟ್ಟದಲ್ಲಿ ಲೈಸೆನ್ಸ್, ಸರ್ವೇ ಕಾರ್ಯ ವಿಳಂಬ ಹಾಗೂ ಸ್ಥಳೀಯ ಪಂಚಾಯತ್ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ತುರ್ತು ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎಚ್.ವಿ ಇಬ್ರಾಹಿಂಪುರ್, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರಂಜನ್ ಪೂಜಾರಿ, ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಕಂದಾಯ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Gayathri SG

Recent Posts

ಕೋವಿಶೀಲ್ಡ್ ಪಡೆದ ಬಳಿಕ ಭಾರತದ ಇಬ್ಬರು ಹೆಣ್ಮಕ್ಕಳು ಸಾವು !

ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್​ ಮುಂದೆ ಒಪ್ಪಿಕೊಂಡಿದೆ.

5 mins ago

ಏಳು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಹಡಗು

ಏಳು ವರ್ಷಗಳ ಬಳಿಕ ಮತ್ತೆ ಮಂಗಳೂರು ಲಕ್ಷದ್ವೀಪದ ನಡುವೆ ಹೈಸ್ಪೀಡ್ ಹಡಗು ಸಂಚಾರ ಆರಂಭವಾಗಿದ್ದು, ಗುರುವಾರ ಸಂಜೆ ಲಕ್ಷದ್ವೀಪದಿಂದ 150ಕ್ಕೂ…

14 mins ago

ಬೃಹತ್ ಗಾತ್ರದ ಮರ ಬಿದ್ದು ಹೊಸ ಕಾರು ಜಖಂ

ನಿಂತಿದ್ದ ಹೋಂಡಾ ಎಲಿವೇಟ್ SUV ಬ್ರಾಂಡ್ ಹೊಸ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಘಟನೆ ಲಾವೆಲ್ಲೇ ರೋಡ್​ನಲ್ಲಿ ನಡೆದಿದೆ.

34 mins ago

ಈ ನಾಯಕನ ರಾಸಲೀಲೆಗೆ ವರ್ಷಕ್ಕೆ 25 ಹುಡುಗಿಯರು ಬೇಕಂತೆ!

ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರು ತನ್ನ ವಿಚಿತ್ರ ನಿರ್ಧಾರಗಳಿಂದಲೇ ಸುದ್ದಿಯಾದವರು.ಸದ್ಯ ಇವರ ಮೇಲೆ ಯೆನ್ಮಿ ಪಾರ್ಕ್…

43 mins ago

ಕಬಕದಲ್ಲಿ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು

ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿಯಾದ…

52 mins ago

ಸಂಸದ ಪ್ರಜ್ವಲ್‌ ಗೆ ಅಭಿಮಾನಿಯಿಂದ ಶುಭಾಶಯ ಪತ್ರ

ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳು ದೇಶಾದ್ಯಂತ ಭಾರೀ ಚರ್ಚೆ ಯಾಗುತ್ತಿದ್ದು, ಈ ನಡುವೆ ಅಭಿಮಾನಿಯೊಬ್ಬ ಪ್ರಜ್ವಲ್‌…

1 hour ago