News Karnataka Kannada
Tuesday, April 30 2024
ಉಡುಪಿ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿಗಳನ್ನು ಶೀಘ್ರ ಅನುಷ್ಠಾನಗೊಳಿಸದಿದ್ದರೆ ಪ್ರತಿಭಟನೆ

Protests if the guarantees announced in the Congress manifesto are not implemented at the earliest
Photo Credit : News Kannada

ಉಡುಪಿ: ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಗ್ಯಾರಂಟಿಗಳನ್ನು ಶೀಘ್ರ ಅನುಷ್ಠಾನಗೊಳಿಸಬೇಕು. ತಪ್ಪಿದಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೊದಲ ದಿನವೇ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಹೇಳಿತ್ತು.ಈಗ ಹತ್ತು ದಿನ ಕಳೆದಿವೆ. ಅಲ್ಲದೆ, ಷರತ್ತುಗಳನ್ನು ವಿಧಿಸುವ ಮಾತನಾಡುತ್ತಿದೆ. ಆದರೆ ನಾವು ಅದಕ್ಕೆ ಒಪ್ಪುವುದಿಲ್ಲ. ಯಾವುದೇ ಷರತ್ತುಗಳಿಲ್ಲದೆ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಜನರು ವಿದ್ಯುತ್ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ. ಬಸ್ ನಲ್ಲಿ‌ ಮಹಿಳೆಯರು ಹಣ ನೀಡಬೇಡಿ. ನಿರ್ವಾಹಕ ಹಣ ಕೇಳಿದರೆ ಬಿಜೆಪಿ ಕಾರ್ಯಕರ್ತರಿಗೆ ಫೋನ್ ಮಾಡಿ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರಾಘವೇಂದ್ರ ಕಿಣಿ , ಶ್ರೀನಿಧಿ ಹೆಗ್ಡೆ, ಶಿವಕುಮಾರ್ ಅಂಬಲಪಾಡಿ, ಸತ್ಯಾನಂದ ನಾಯಕ್ ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು