News Karnataka Kannada
Monday, April 22 2024
Cricket
ಉಡುಪಿ

ರಾಮ ಮಂದಿರ ನಿರ್ಮಾಣವಾಗಿದೆ, ಇನ್ನು ರಾಮರಾಜ್ಯ ನಿರ್ಮಾಣವಾಗಬೇಕಾಗಿದೆ: ಪೇಜಾವರ ಶ್ರೀ

Ram Temple has been built, Ram Rajya has to be built: Pejawar Sri
Photo Credit : News Kannada

ಉಡುಪಿ: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿ ಜಂಬೂರಿನ ನಾಗರಾಜನಿಗೆ ಯಕ್ಷಗಾನ ಕಲಾರಂಗ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತಾವೇ ಪ್ರಾಯೋಜಕತ್ವ ವಹಿಸಿ ನಿರ್ಮಿಸಿದ ಮನೆಯನ್ನು ಉದ್ಘಾಟಿಸಿದರು.
ಬಳಿಕ ಅನುಗ್ರಹ ಸಂದೇಶ ನೀಡಿದ ಶ್ರೀಗಳು, ಸಮಾಜದಲ್ಲಿ ಉಳ್ಳವರು ಇಲ್ಲದವರಿಗೆ ಸಹಾಯ ಮಾಡಿದರೆ ರಾಮರಾಜ್ಯದ ಕನಸು ನನಸಾಗುತ್ತದೆ ಎಂದರು.

ಸಾಕಷ್ಟು ಜನ ಧನಿಕರಿದ್ದಾರೆ. ಅವರ ಸಂಪತ್ತು ಬಡವರಿಗೆ ಸಿಗಬೇಕಾದರೆ ಯಕ್ಷಗಾನ ಕಲಾರಂಗದಂತಹ ವಿಶ್ವಾಸಾರ್ಹ ಸಂಘಟನೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಮನೆಯ ಸಹಪ್ರಾಯೋಜಕರಾದ ಗುರುರಾಜ್ ಅಮೀನ್ ಮತ್ತು ಜಯಲಕ್ಷ್ಮಿ ಜಿ. ಅಮೀನರಿಗೆ ಸ್ವಾಮೀಜಿಯವರು ಅನುಗ್ರಹ ಮಂತ್ರಾಕ್ಷತೆ ನೀಡಿ ಹರಸಿದರು.

ಅಭ್ಯಾಗತರಾಗಿ ಕೆ. ಸದಾಶಿವ ಭಟ್, ಯು. ರಾಜಗೋಪಾಲ ಅಚಾರ್ಯ, ಬಿಲ್ಲಾಡಿ ಸೀತಾರಾಮ್ ಶೆಟ್ಟಿ, ಸಜಿತ್ ಹೆಗ್ಡೆ ಭಾಗವಹಿಸಿದ್ದರು. ಸಂಸ್ಥೆಯ ಸದಸ್ಯರಾದ ಭುವನಪ್ರಸಾದ್ ಹೆಗ್ಡೆ, ವಿದ್ಯಾಪ್ರಸಾದ್, ಕಿಶೋರ್ ಸಿ. ಉದ್ಯಾವರ, ಅಜಿತ್ ಕುಮಾರ್, ಗಣೇಶ್ ಬ್ರಹ್ಮಾವರ, ರಾಜೀವಿ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಎಚ್. ಎನ್. ಶೃಂಗೇಶ್ವರ್ ಸಹಕರಿಸಿದರು, ನಾರಾಯಣ ಎಂ. ಹೆಗಡೆ ವಂದಿಸಿದರು. ಇದು ಸಂಸ್ಥೆ ದಾನಿಗಳ ನೆರವಿನಿಂದ ನಿರ್ಮಿಸಿದ 42ನೆಯ ಮನೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು