News Karnataka Kannada
Sunday, May 19 2024
ಉಡುಪಿ

ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಮತ ಗಳಿಕೆಯ ಅಸ್ತ್ರ ಆಗಬಾರದು: ಕೂರ್ಮಾರಾವ್ ಎಂ

Religious and social programmes should not be a tool to garner votes: Deputy Commissioner Koormarao M
Photo Credit : News Kannada

ಉಡುಪಿ: ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಮತ ಗಳಿಕೆ ಹಾಗೂ ರಾಜಕೀಯ ಅಸ್ತ್ರ ಆಗಬಾರದು. ಮತದಾನಕ್ಕೆ 48 ಗಂಟೆ ಮೊದಲು ಚುನಾವಣಾ ಜಾಹೀರಾತು ಪ್ರಕಟಿಸಲು ಪ್ರಾಮಾಣೀಕರಣ ಕಡ್ಡಾಯವಾಗಿದೆ. ಸಾಮಾಜಿಕ ಜಾಲತಾಣಗಳ ಬಗ್ಗೆ 24 ಗಂಟೆಗಳ ಕಾಲ ನಿಗಾ ಇರಿಸ ಲಾಗುತ್ತದೆ. ಪಕ್ಷ ಅಭ್ಯರ್ಥಿ ಮತ್ತು ಚುನಾವಣೆಯ ಮೇಲೆ ಪರಿಣಾಮ ಬೀರುವ ಅಂಶಗಳನ್ನು ಕುರಿತು ಪರಿಶೀಲನೆ ಮಾಡಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತದ ಮಾಧ್ಯಮ ಪ್ರಾಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ) ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿ ಉಡುಪಿ ಜಿಲ್ಲೆಯ ಮಾಧ್ಯಮದವರಿಗೆ ಗುರುವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡುತಿದ್ದರು.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ಮಾತ ನಾಡಿ, ಚುನಾವಣೆಯಲ್ಲಿ ಅಕ್ರಮ ತಡೆಯುವ ನಿಟ್ಟಿನಲ್ಲಿ ಚೆಕ್ಫೋಸ್ಟ್ಗಳನ್ನು ನಿರ್ಮಿಸಲಾಗಿದೆ. ಕೆಲವು ಕಡೆ ದಿಢೀರ್ ಕಾರ್ಯಾಚರಣೆಗಳನ್ನು ಮಾಡ ಲಾಗುತ್ತಿದೆ. ಏಕಕಾಲದಲ್ಲಿ ಜಿಲ್ಲೆಯಾದ್ಯಂತ ಇರುವ ಗೋಡಾನ್, ಕಟ್ಟಡಗಳಿಗೆ ದಾಳಿ ನಡೆಸಿ ದೊಡ್ಡ ಪ್ರಮಾಣದಲ್ಲಿ ವಸ್ತುಗಳನ್ನು ಸಂಗ್ರಹಿಸಲಾಗಿದೆಯೇ ಎಂಬುದನ್ನು ಪರಿಶೀಲನೆ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಈವರೆಗೆ ದಾಖಲಾತಿ ಇಲ್ಲದ 48.50ಲಕ್ಷ ರೂ. ನಗದು ಹಣ ವನ್ನು ವಶಪಡಿಸಲಾಗಿದೆ. ಅಬಕಾರಿ ಇಲಾಖೆಯೊಂದಿಗೆ ಸೇರಿ 6000ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಸಾಗಾಟ ಮಾಡುತಿದ್ದ ಅಕ್ಕಿಯನ್ನು ಕೂಡ ವಶಪಡಿಸಿಕೊಂಡಿದ್ದೇವೆ. ಈ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಅವರು ತಿಳಿಸಿದರು.

ಅದೇ ರೀತಿ ಪೊಲೀಸ್ ಇಲಾಖೆ ಮೂಲಕ ಎಸ್ಪಿ ಕಚೇರಿಯಲ್ಲಿ ಸ್ಥಾಪಿಸಿರುವ ಸೆಲ್ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬರುವ ವಿಚಾರಗಳ ಬಗ್ಗೆ ನಿಗಾ ಇರಿಸ ಲಾಗಿದೆ. ಅನುಮತಿ ಪಡೆದರೂ ಸಾಮಾಜಿಕ ಜಾಲತಾಣಗಳಲ್ಲಿ ಏನು ಬೇಕಾದರೂ ಬರೆಯುವಂತಿಲ್ಲ. ಅದಕ್ಕೆ ಅದರದ್ದೆ ಆದ ಕಾನೂನು ಚೌಕಟ್ಟುಗಳಿವೆ ಮತ್ತು ಚುನಾವಣಾ ಆಯೋಗದ ನಿಯಮಗಳಿವೆ. ಜಾತಿ, ಧರ್ಮ, ಸಮುದಾಯ, ಭಾಷೆ ಆಧಾರದಲ್ಲಿ ಮತಗಳನ್ನು ಕೇಳಲು ಅವಕಾಶ ಇಲ್ಲ ಎಂದು ಅವರು ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅಶೋಕ್ ಕಾಮತ್ ಮಾದರಿ ನೀತಿ ಸಂಹಿತೆ ಕುರಿತು ಮಾಹಿತಿ ನೀಡಿದರು. ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು