News Karnataka Kannada
Friday, April 19 2024
Cricket
ಉಡುಪಿ

ಟ್ರಾನ್ಸ್ಫಾರ್ಮರ್ ಹತ್ತಿದ ಯುವಕನ ರಕ್ಷಣೆ; ಆಸ್ಪತ್ರೆಗೆ ದಾಖಲು

New Project 2024 01 30t130417.572
Photo Credit : News Kannada

ಉಡುಪಿ: ಉಡುಪಿ ಬಲಾಯಿಪಾದೆ ಬಳಿ ಇಂದು ಬೆಳಿಗ್ಗೆ ಟ್ರಾನ್ಸ್ಫಾರ್ಮರ್ ಕಂಬ ಹತ್ತಿ ವಿದ್ಯುತ್ ತಂತಿಯನ್ನು ಮುಟ್ಟಲು ಯತ್ನಿಸುತ್ತಿದ್ದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಸಾರ್ವಜನಿಕರ ಸಹಕಾರದಿಂದ ರಕ್ಷಿಸಿ ಉಡುಪಿಯ ಬಾಳಿಗ ಆಸ್ಪತ್ರೆಗೆ ದಾಖಲಿಸುವ ಮೂಲಕ ಯುವಕನ ಪ್ರಾಣವನ್ನು ಉಳಿಸಿದ್ದಾರೆ.

ರಕ್ಷಿಸಲ್ಪಟ್ಟ ಯುವಕನನ್ನು ಮಂಚಕಲ್ ಹಳೆಯಂಗಡಿ ಪರಿಸರದ ಸೂರಜ್ (28) ಎಂದು ಗುರುತಿಸಲಾಗಿದೆ. ವಾರಿಸುದಾರರು ಬಾಳಿಗಾ ಆಸ್ಪತ್ರೆಯನ್ನು ಸಂಪರ್ಕಿಸಲು ಕೋರಲಾಗಿದೆ. ಈ ಸಂದರ್ಭದಲ್ಲಿ ಮಲ್ಪೆ ಠಾಣೆ ಎಎಸ್ಐ ತನಿಯ ಹಾಜರಿದ್ದರು. ಪ್ರಕರಣದ ಬಗ್ಗೆ ನಗರ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ವಿಶು ಶೆಟ್ಟಿ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು