Categories: ಉಡುಪಿ

ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಖಂಡನೀಯ: ಮಾಜಿ ಸಚಿವ ಸುನಿಲ್ ಕುಮಾರ್

ಉಡುಪಿ: ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರಕಾರಕ ಕ್ರಮವನ್ನು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಖಂಡಿಸಿದ್ದಾರೆ.
ಪಠ್ಯ ಪರಿಷ್ಕರಣೆ ಬಗ್ಗೆ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಅನುಮಾನ ಬರುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ವಿಡಿಯೋ ಹೇಳಿಕೆ‌ ಬಿಡುಗಡೆ ಮಾಡಿರುವ ಅವರು, ಅಧಿಕಾರಕ್ಕೆ ಬಂದು ತಿಂಗಳು ಕಳೆಯುವಷ್ಟರಲ್ಲೇ ಸಿದ್ದ ರಾಮಯ್ಯ ಸರ್ಕಾರ ಪಠ್ಯ-ಪುಸ್ತಕ ಪರಿಷ್ಕರಣೆಗೆ ಕೈ ಹಾಕಿದೆ. ಪಠ್ಯದಲ್ಲಿ ಭಾರತೀಯತೆ, ಸಂಸ್ಕೃತಿ ಹಾಗೂ ಇತಿಹಾಸದ ನೈಜ್ಯ ಸತ್ಯಗಳೇನು ಎಂಬುದು ವಿದ್ಯಾರ್ಥಿಗಳಿಗೆ ತಿಳಿಯದಂತೆ ಮುಚ್ಚಿಡುವುದು ಸರಕಾರದ ಉದ್ದೇಶವೇ ? ಶಾಲೆಗಳಿಗೆ ಪಠ್ಯ- ಪುಸ್ತಕ ಪೂರೈಕೆಯಾದ ನಂತರ ಪರಿಷ್ಕರಣೆಯ ಹಟವೇಕೆ? ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯನವರೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಇಲಾಖೆಯ ಇತರ ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುವುದಕ್ಕಾದರೂ ಅವಕಾಶ ಕೊಡಿ. ಅದನ್ನು ಬಿಟ್ಟು ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಕಲಿಸುವ ಪಾಠ ನಿರ್ಧರಿಸಿ ಎಂದು ನೀವು ಪಾಠ ಮಾಡಬೇಡಿ ಎಂದು ಕಿಡಿಕಾರಿದರು.

ಸಿದ್ದರಾಮಯ್ಯನವರೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಇಲಾಖೆಯ ಇತರ ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುವುದಕ್ಕಾದರೂ ಅವಕಾಶ ಕೊಡಿ. ಅದನ್ನು ಬಿಟ್ಟು ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಕಲಿಸುವ ಪಾಠ ಯಾವುದೆಂದು ನಿರ್ಧರಿಸಿ ಎಂದು ನೀವು ಪಾಠ ಮಾಡಬೇಡಿ ಎಂದು ಹೇಳಿದ್ದಾರೆ.

ನಾನು ಮೇಷ್ಟ್ರಾಗಿದ್ದೆ ಕಣೋ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡುವುದಕ್ಕೆ ಮುನ್ನ ವಿದ್ಯಾರ್ಥಿ ಹಾಗೂ ಶಿಕ್ಷಕರ ಸಮಸ್ಯೆ ಮೊದಲು ಅರ್ಥ ಮಾಡಿಕೊಳ್ಳಿ. ಪಠ್ಯ ಪರಿಷ್ಕರಣೆ ಬಗ್ಗೆ ನಿಮಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಅನುಮಾನ ಬರುತ್ತಿದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರೇ ನಿಮಗೆ ಶ್ರೇಷ್ಠ ಭಾರತೀಯ ಚಿಂತನೆಗಳು, ನಿಜವಾದ ಆದರ್ಶ ಪುರುಷ ಯಾರಾಗಬೇಕು ? ತಾಯಿ ಭಾರತೀಯ ಅಮರಪುತ್ರರು ಎಂಬ ವಿಚಾರಗಳು ಹೇಗೆ ಇಷ್ಟವಾಗುತ್ತದೆ ಹೇಳಿ? ನಿಮ್ಮ ದೃಷ್ಟಿಯಲ್ಲಿ ಶಾಲಾ ಪಠ್ಯದಲ್ಲಿ ನಕಲಿ ಗಾಂಧಿ ಕುಟುಂಬದ ಚರಿತ್ರೆ, ವಿದೇಶಿ ದಾಳಿಯ ವಿಕೃತಿಗಳು ಮಾತ್ರ ತುಂಬಿರಬೇಕಲ್ಲವೇ ? ಎಂದು ಟೀಕಿಸಿದ್ದಾರೆ.

Ashika S

Recent Posts

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

12 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

29 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

37 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

56 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

9 hours ago