Categories: ಉಡುಪಿ

ನಿಂತಿದ್ದ ಬೊಲೆರೋ ವಾಹನಕ್ಕೆ ಸ್ಕೂಟರ್ ಡಿಕ್ಕಿ; ಯುವಕ ಮೃತ್ಯು

ಉಡುಪಿ:  ದ್ವಿಚಕ್ರ ವಾಹನವೊಂದು ನಿಂತಿದ್ದ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ಆತನ ತಾಯಿ ಗಾಯಗೊಂಡ ಘಟನೆ ಉಡುಪಿ ಉದ್ಯಾವರ ಹಲೀಮಾ ಸಾಬ್ಜು ಆಡಿಟೋರಿಯಂ ಎದುರು ಇಂದು ಬೆಳಿಗ್ಗೆ ಸಂಭವಿಸಿದೆ.

ಮೃತ ಯುವಕನನ್ನು ಉಚ್ಚಿಲ ಪೊಲ್ಯ ನಿವಾಸಿ ಅಝೀಜ್ ಎಂಬವರ ಪುತ್ರ ಮುಫ್ರೀನ್ (18 ) ಎಂದು ಗುರುತಿಸಲಾಗಿದೆ. ಆತನ ತಾಯಿ ಹಾಜಿರಾ ಭಾನು ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ 8.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡಿಕೊಂಡಿರುವ ಅಝೀಜ್ ಹೆಜ್ಮಾಡಿಯಲ್ಲಿ ನೆಲೆಸಿದ್ದು, ಇತ್ತೀಚೆಗೆ ಊರಿಗೆ ಬಂದು ವಾಪಾಸಾಗಿದ್ದರು.

ಇಂದು ಬೆಳಗ್ಗೆ ಹೆಜ್ಮಾಡಿಯಿಂದ ಮುಫ್ರೀನ್ ತನ್ನ ತಾಯಿಯನ್ನು ಹೈಟೆಕ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದ್ವಿಚಕ್ರ ವಾಹನವೊಂದರಲ್ಲಿ ಕರೆದೊಯ್ಯುತ್ತಿದ್ದ ವೇಳೆ ಉದ್ಯಾವರ ಹಲೀಮಾ ಸಾಬ್ಜು ಆಡಿಟೋರಿಯಂ ಮುಂದೆ ನಿಲ್ಲಿಸಲಾಗಿದ್ದ ಬೊಲೆರೋ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಮುಫ್ರೀನ್ ಗಂಭೀರ ಗಾಯಗೊಂಡಿದ್ದು, ಆತನನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆತ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಈ ವೇಳೆ ಆತನ ತಾಯಿ ಹಾಜಿರಾ ಭಾನು ಗಂಭೀರ ಗಾಯಗೊಂಡಿದ್ದು, ಅವರನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ತಲೆಯ ಭಾಗಕ್ಕೆ ಗಾಯವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ

Nisarga K

Recent Posts

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

10 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

18 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

24 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

37 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

55 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

1 hour ago