News Karnataka Kannada
Friday, May 17 2024
ಉಡುಪಿ

ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ: ಶರಣ್‌ ಪಂಪ್‌ವೆಲ್‌ ಪ್ರಚೋದನಾಕಾರಿ ಭಾಷಣ

Photo Credit : News Kannada

ಉಡುಪಿ: ಉಡುಪಿ ಕಾಲೇಜು ವಿದ್ಯಾರ್ಥಿಗಳ ವಾಶ್ ರೂಂ ವಿಡಿಯೋ ವಿವಾದದ ಕುರಿತು ನ್ಯಾಯಯುತ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಗುರುವಾರ ನಡೆಯಿತು.

ಉಡುಪಿ ಜೋಡುಕಟ್ಟೆಯಿಂದ ಆರಂಭವಾದ ಪ್ರತಿಭಟನಾ ರ್ಯಾಲಿ ಉಡುಪಿ ನಗರದ ಮೂಲಕ ಸಾಗಿತು. ರ್ಯಾಲಿಯ ನೇತೃತ್ವವನ್ನು ಹಿಂದೂ ಕಾರ್ಯಕರ್ತೆ ರಶ್ಮಿ ಸಾಮಂತ್, ಬಿಜೆಪಿ ಸದಸ್ಯೆ ಶಕುಂತಲಾ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್, ವಿಎಚ್‌ಪಿ ಮತ್ತು ಬಜರಂಗದಳದ ಮುಖಂಡರಾದ ಶರಣ್ ಪಂಪ್‌ವೆಲ್, ಸುನೀಲ್ ಕೆ ಆರ್ ಮುಂತಾದವರು ವಹಿಸಿದ್ದರು. ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿತ್ತು.

ಪ್ರಚೋದನಕಾರಿ ಭಾಷಣ: ಹಿಂದೂ ತಾಯಂದಿರು ಎಚ್ಚರ ಆಗಬೇಕು, ಸೌಟು, ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಿರಿ. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ರೆಡಿಯಾಗಿ ಎಂದು ವಿಶ್ವ ಹಿಂದು ಪರಿಷತ್‌ ಮುಖಂಡ ಶರಣ್  ಪಂಪ್‌ವೆಲ್‌ ಹೇಳಿದರು.

ಸನಾತನ ಹಿಂದೂ ಸಂಸ್ಕೃತಿ ನಾಶ ಮಾಡಲು ಹಿಂದೆ ರಾಕ್ಷಸಿಯರು ಬಂದಿದ್ದರು. ಈಗ ಜಿಹಾದಿ ರಾಕ್ಷಸಿಯರ ಮೂಲಕ ಹಿಂದೂ ಹೆಣ್ಮಕ್ಕಳ ಮಾನ ತೆಗೆಯಲು ಬಂದಿದ್ದಾರೆ. ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ ಕೊಡಲಿದ್ದೇವೆ. ಇಂತಹ ದಾಳಿ ಇಂದಿಗೇ ಕೊನೆಯಾಗಬೇಕು. ಸೌಟು, ಪೊರಕೆ ಹಿಡಿಯುವ ತಾಯಂದಿರ ಕೈಗಳು ಶಸ್ತ್ರ ಹಿಡಿಯಬೇಕು. ಅನ್ಯಾಯಕ್ಕೆದುರಾಗಿ ತಲವಾರು ಹಿಡಿಯಬೇಕು. ನಮ್ಮ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ಕೊಡಬೇಕಾಗಿದೆ.

ಹಿಂದು ಯುವತಿಯರು, ಶ್ರದ್ಧಾಕೇಂದ್ರಗಳನ್ನು ಮುತಾನರು ಟಾರ್ಗೆಟ್ ಮಾಡಿದ್ದಾರೆ. ಕಾಲೇಜಿನ ಡಾ.ಅಬ್ದುಲ್ ಖಾದರ್ ತಪ್ಪು ಮಾಡಿದ ವಿದ್ಯಾರ್ಥಿನಿಯರಿಗೆ ಐದು ಬಾರಿ ನೋಟ್ಸ್ ಬರೆಯುವ ಶಿಕ್ಷೆ ನೀಡಿದ್ದಾರೆ. ಈ ಶಿಕ್ಷೆಯನ್ನು ಬ್ಯೂಟಿಪುಲ್ ಶಿಕ್ಷೆ ಅಂತಾ ಖಾದರ್ ಹೇಳಿದ್ದಾನೆ. ಅಬ್ದುಲ್ ಖಾದರ್‌ ಅವರನ್ನು ಕಾಲೇಜಿನಿಂದಲೇ ಅಮಾನತು ಮಾಡಬೇಕು. ಖಾದರ್ ಗೆ ಎಚ್ಚರಿಕೆ ನೀಡುತ್ತಿದ್ದೇನೆ, ಬ್ಯೂಟಿಫುಲ್ ಶಿಕ್ಷೆ ನೀಡೋಕೆ ನಮಗೂ ಗೊತ್ತಿದೆ. ನಮ್ಮ ಕಾರ್ಯಕರ್ತರೂ ಬ್ಯೂಟಿ ಫುಲ್ ಶಿಕ್ಷೆ ನೀಡುತ್ತಾರೆ.

ಈ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ವಿಡಿಯೋ ತೆಗೆದು ಬ್ಲಾಕೇಲ್ ಮಾಡುವ ತಂತ್ರ ಹಾಗೇ ನಡೆಯುವಂಥದ್ದಲ್ಲ. ಮಕ್ಕಳಿರುವಾಗಲೇ ಮದ್ರಸಾದಲ್ಲಿ ಈ ರೀತಿಯ ಶಿಕ್ಷಣ ನೀಡುತ್ತಿರುವ ಬಗ್ಗೆ ಅನುಮಾನ ಇದೆ. ರಾಜ್ಯ ಸರ್ಕಾರ ಕೂಡಲೇ ಮದ್ರಸ ಶಿಕ್ಷಣವನ್ನು ಬ್ಯಾನ್‌ ಮಾಡಬೇಕು. ಉಡುಪಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಎನ್‌ಐಎಗೆ ಒಪ್ಪಿಸಬೇಕು. ಇದರ ಹಿಂದೆ ಭಯೋತ್ಪಾದಕ ಕೃತ್ಯದ ಹುನ್ನಾರ ಇದೆಯೇ ಎಂಬುದನ್ನು ಪತ್ತೆ ಮಾಡಬೇಕು ಎಂದು ಪ್ರತಿಭಟನಾ ಸಭೆಯಲ್ಲಿ ಶರಣ್ ಪಂವೆಲ್ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು