News Karnataka Kannada
Monday, May 20 2024
ಉಡುಪಿ

ಶಿರೂರು: ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಲೂಟಿ

Shirur: Gold ornaments worth lakhs of rupees looted in broad daylight
Photo Credit : News Kannada

ಕುಂದಾಪುರ: ಹಾಡುಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಇಲ್ಲಿನ ಶಿರೂರು ಮಾರ್ಕೆಟ್ ಬಳಿ ಠಾಕೇಶ್ ಪಟಗಾರ್ ದಂಪತಿಗಳು ವೃತ್ತಿಯಲ್ಲಿ ಶಿಕ್ಷಕರಾಗಿದ್ದು ಮದ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು 32 ಗ್ರಾಂ ಮಾಂಗಲ್ಯ ಸರ ಸೇರಿದಂತೆ, 10 ಗ್ರಾಂ ಕಿವಿಯೋಲೆ, 100 ಗ್ರಾಂ ಬೆಳ್ಳಿ ಹಾಗೂ 1000 ರೂಪಾಯಿ ನಗದು ಕದ್ದೊಯ್ದಿದ್ದಾರೆ.

ಪಕ್ಕದ ಮನೆಗೆ ತೆರಳಿ ಅಲ್ಲೂ ಕೂಡ ಬಾಗಿಲು ಒಡೆಯುತ್ತಿರುವುದನ್ನು ನೋಡಿ ಮನೆಯವರು ಕೂಗಿದ ಬಳಿಕ ಕಳ್ಳರು ಪರಾರಿಯಾಗಿದ್ದಾರೆ. ಕೆಲವೇ ದಿನಗಳ ಹಿಂದೆ ಇದೇ ಭಾಗದಲ್ಲಿ ಸಂಜೆ ವೇಳೆ ಸುಮಾರು 35 ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯದ್ದ ಬೆನ್ನಲೇ ಈ ರೀತಿ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಶಿರೂರಿನಲ್ಲಿ ಹೆಚ್ಚುತ್ತಿರುವ ಗಾಂಜಾ ಪ್ರಕರಣ,ಅನಧೀಕೃತ ಚಟುವಟಿಕೆಗಳು ಇಂತಹ ಪ್ರಕರಣಕ್ಕೆ ಇನ್ನಷ್ಟು ದಾರಿ ಮಾಡಿಕೊಡುತ್ತಿದೆ. ಹೀಗಾಗಿ ಆರಕ್ಷಕ  ಇಲಾಖೆ ಅನಧೀಕೃತ ಚಟುವಟಿಕೆಗೆ ಕಡಿವಾಣ ಹಾಕುವ ಜೊತೆಗೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂಬುವುದು ಸಾರ್ವಜನಿಕರ ಅಭಿಪ್ರಾಯಾವಗಿದೆ. ಬೈಂದೂರು ಆರಕ್ಷರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು