Categories: ಉಡುಪಿ

ಶಿರ್ವ: ಬೈಕಿನಿಂದ ಬಿದ್ದು ಮಹಿಳೆ ಸಾವು

ಶಿರ್ವ, ಆ.2: ಬೈಕಿನಿಂದ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪಳ್ಳಿ- ಸೂಡಾ ರಸ್ತೆಯ ಮಕ್ಕೇರಿಬೈಲು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಕಣಂಜಾರು ಗುಂಡಳಿಕೆ ನಿವಾಸಿ ತುಕ್ರ ಪೂಜಾರಿ ಎಂಬವರ ಮಗಳು ಪುಷ್ಪ(49) ಎಂದು ಗುರುತಿಸಲಾಗಿದೆ. ತನ್ನ ತಮ್ಮ ರಾಜೇಶ್ ಜೊತೆ ನಾಗರಪಂಚಮಿ ಪ್ರಯುಕ್ತ ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ  ಈ ಘಟನೆ ನಡೆದಿದೆ.

ಬೈಕ್‌ನಿಂದ ಆಯತಪ್ಪಿ ಬಿದ್ದ ಪುಷ್ಪಾ ಅವರ ತಲೆಗೆ ತೀವ್ರವಾಗಿ ಗಾಯಗೊಂಡು ಅವರು ಉಡುಪಿ ಅಜ್ಜರಕಾಡು ಸರಕಾರಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ದೂರಲಾಗಿದೆ.ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

5 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

5 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago