News Karnataka Kannada
Thursday, April 25 2024
Cricket
ಉಡುಪಿ

ಶಿವಾಜಿಯ ದೇಶಾಭಿಮಾನವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಛತ್ರಪತಿ ಶಿವಾಜಿ ಅವರ ಆದರ್ಶ, ಶಿಸ್ತು ಹಾಗೂ ದೇಶಾಭಿಮಾನವನ್ನು ವಿದ್ಯಾರ್ಥಿಗಳು ಮೈಗೊಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.
Photo Credit : News Kannada

ಉಡುಪಿ: ಛತ್ರಪತಿ ಶಿವಾಜಿ ಅವರ ಆದರ್ಶ, ಶಿಸ್ತು ಹಾಗೂ ದೇಶಾಭಿಮಾನವನ್ನು ವಿದ್ಯಾರ್ಥಿಗಳು ಮೈಗೊಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.

ಇಂದು ನಗರದ ಸರಕಾರಿ ಬಾಲಕಿಯರ ಪ್ರೌಢಶಾಲೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ತು(ರಿ) ಹಾಗೂ ಛತ್ರಪತಿ ಶಿವಾಜಿ ವಿವಿದ್ದೋದೇಶ ಸಹಕಾರ ಸಂಘ(ರಿ.) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ತಾಯಿಯ ಪ್ರೇರಣೆಯಿಂದ ಉತ್ತಮ ವ್ಯಕ್ತಿತ್ವವನ್ನು ಮೈಗೊಡಿಸಿಕೊಂಡ ಶಿವಾಜಿಯು ಸ್ತ್ರೀಯರ ಕುರಿತು ಅಪಾರ ಗೌರವವನ್ನು ಹೊಂದಿದವರಾಗಿದ್ದು, ಇದು ಯುವಜನತೆಗೆ ಮಾದರಿಯಾಗಿದೆ ಎಂದ ಅವರು, ವಿದ್ಯಾರ್ಥಿನಿಯರು ಒಳ್ಳೆಯ ಶಿಕ್ಷಣವನ್ನು ಪಡೆದು ಸ್ವಾವಲಂಬಿಗಳಾಗಿ ಬದುಕು ನಡೆಸುವಂತೆ ಕರೆ ನೀಡಿದರು.

ಉಪನ್ಯಾಸವನ್ನು ನೀಡಿದ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಅಧ್ಯಕ್ಷ ಪುಂಡಲೀಕ ಮರಾಠೆ ಶಿವಾಜಿಯವರ ಕುರಿತು ಮಾತನಾಡಿ, ಗೆರಿಲ್ಲ ಯುದ್ಧಗಳ ಮೂಲಕ ಶತ್ರುಗಳನ್ನು ಸದೆ ಬಡಿದು ತಮ್ಮ ಸೈನ್ಯದ ಸಂಖ್ಯೆಯನ್ನು ಏರಿಸಿದ ಕೀರ್ತಿ ಶಿವಾಜಿಗೆ ಸಲ್ಲುತ್ತದೆ. ಅತ್ಯಂತ ಮಹತ್ವಕಾಂಕ್ಷಿ ನಾಯಕರಾಗಿದ್ದ ಶಿವಾಜಿ ದಚ್ಚರು, ಪೋರ್ಚುಗೀಸರು ಮತ್ತು ಪ್ರೆಂಚರ ವಿರುದ್ಧ ಹೋರಾಡುವ ಮೂಲಕ ಸಾಂಕೇತಿಕವಾಗಿ ಸ್ವಾತಂತ್ರ‍್ಯ ಹೋರಾಟವನ್ನು ಆರಂಭಿಸಿದರು ಎಂದರು.

ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕರ್ನಾಟಕ ಕ್ಷತ್ರೀಯ ಮರಾಠ ಸಮುದಾಯ(ರಿ) ಅಧ್ಯಕ್ಷ ಪ್ರಕಾಶ್ ರಾವ್, ಛತ್ರಪತಿ ಶಿವಾಜಿ ವಿವಿದ್ದೋದೇಶ ಸಹಕಾರ ಸಂಘ(ರಿ.) ಉಡುಪಿ ಇದರ ಅಧ್ಯಕ್ಷ ದಿನೇಶ್ ಸಿ ನಾಯಕ್ ಮೊರೆ, ಶಾಲೆಯ ಬೋಧಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು