News Karnataka Kannada
Wednesday, May 08 2024
ಉಡುಪಿ

ಉಡುಪಿ: ಪ್ರವೀಣ್ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲು ಶೋಭಾ ಕರಂದ್ಲಾಜೆ ಆಗ್ರಹ

Hindu youth are being murdered by fanatics: Shobha Karandlaje
Photo Credit : Facebook

ಉಡುಪಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.

‘ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಕೇರಳ ನೋಂದಣಿ ಸಂಖ್ಯೆಯ ಬೈಕ್‌ನಲ್ಲಿ ಬಂದ ಹಂತಕರು ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದ್ದಾರೆ. ಸಮಾಜದ ಶಾಂತಿ ಕದಡಲು ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಗಳಾದ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕೇರಳದ ಮೂಲಭೂತವಾದಿ ಸಂಘಟನೆಗಳು ಕೊಲೆಗೆ ಸಂಚು ರೂಪಿಸಿ ಧನ ಸಹಾಯ ಮಾಡಿರುವ ಶಂಕೆಯೂ ಇದೆ’ ಎಂದು ಶೋಭಾ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೇಂದ್ರ ಗೃಹ ಇಲಾಖೆ ಮಧ್ಯೆ ಪ್ರವೇಶಿಸಿ ಪಿಎಫ್‌ಐ, ಎಸ್‌ಡಿಪಿಐ ಹಾಗೂ ಇತರ ಮೂಲಭೂತವಾದಿ ಸಂಘಟನೆಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸಬೇಕು. ಪ್ರಕರಣದಲ್ಲಿ ಭಯೋತ್ಪಾದಕ ಸಂಘಟನೆಗಳ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆದಿರುವ ಅನುಮಾನವಿದ್ದು, ಎನ್‌ಐಎ ತನಿಖೆಯಾಗಬೇಕು ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು