News Karnataka Kannada
Sunday, May 05 2024
ಉಡುಪಿ

ಉಡುಪಿ: ಶುಭಂ ಸಂಸ್ಥೆಯಿಂದ ಆಯ್ದ 200 ಶಾಲೆಗಳಿಗೆ ಉಚಿತ ಮೆಡಿಕಲ್ ಕಿಟ್‌ ವಿತರಣೆ

Udupi
Photo Credit : News Kannada

ಉಡುಪಿ: ಶುಭಂ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಶಿವಮೊಗ್ಗ ಇದರ ವತಿಯಿಂದ ಜಿಲ್ಲೆಯ ಕಾರ್ಕಳ, ಉಡುಪಿ ಹಾಗೂ ಕುಂದಾಪುರ ತಾಲೂಕಿನ ಆಯ್ದ 200 ಶಾಲೆಗಳಿಗೆ ಉಚಿತವಾಗಿ ಮೆಡಿಕಲ್ ಕಿಟ್‌ಗಳನ್ನು ವಿತರಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಶ್ರೀಧರ ಹೆಗ್ಡೆ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಭಂ ಸಂಸ್ಥೆ ಶಿವಮೊಗ್ಗದಲ್ಲಿ ಪ್ರಧಾನ ಕಚೇರಿ ಹೊಂದಿದ್ದು, ಉಡುಪಿ, ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಕಾರ್ಕಳ, ಕಟೀಲು ಹಾಗೂ ಕುಂದಾಪುರದಲ್ಲಿ ಶಾಖಾ ಕಚೇರಿಯನ್ನು ಹೊಂದಿದೆ ಎಂದರು.

ಜಿಲ್ಲೆಯಲ್ಲಿ 5 ಸಾವಿರ ಸದಸ್ಯರಿದ್ದು, ವಿದ್ಯಾರ್ಥಿವೇತನ, ಸ್ವ ಉದ್ಯೋಗ ತರಬೇತಿ, ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರಗಳನ್ನು ನಡೆಸಿಕೊಂಡು ಬರುತ್ತಿದೆ. ಪ್ರಸ್ತುತ ಸಂಸ್ಥೆಗೆ ಐದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‌ಶಾಲಾ ಮಕ್ಕಳಿಗೆ ಮೆಡಿಕಲ್ ಕಿಟ್ ವಿತರಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷೆ ಮಮತಾ, ಕಾರ್ಯದರ್ಶಿ ಧನ್‌ರಾಜ್, ಮೇಲ್ವೀಚಾರಕ ರವಿ ಆಚಾರ್ಯ, ಮಾಜಿ ಕಾರ್ಯದರ್ಶಿ ಪವಿತ್ರಾ ಕೆ. ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು