News Karnataka Kannada
Thursday, April 18 2024
Cricket
ಉಡುಪಿ

ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ

ಲೋಕಸಭಾ ಚುನಾವಣೆ ಸಿದ್ಧತೆಗಾಗಿ 'ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ'ವನ್ನು ಇದೇ ಬರುವ ಫೆ.17ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ತಿಳಿಸಿದರು.
Photo Credit : News Kannada

ಉಡುಪಿ: ಲೋಕಸಭಾ ಚುನಾವಣೆ ಸಿದ್ಧತೆಗಾಗಿ ‘ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ’ವನ್ನು ಇದೇ ಬರುವ ಫೆ.17ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ತಿಳಿಸಿದರು.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಈ ಸಮಾವೇಶದಲ್ಲಿ ಉಡುಪಿ ಜಿಲ್ಲೆಯಿಂದ 15 ಸಾವಿರ ಮಂದಿ ಪ್ರಮುಖ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ರ್ಖಗೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮೊದಲಾದವರು ಭಾಗವಹಿಸಲಿದ್ದಾರೆ. ಪ್ರತಿ ಬೂತ್ ಗಳಿಂದ ಕನಿಷ್ಠ 20 ಮಂದಿ ಸೇರಿದಂತೆ 1 ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಭಾಸ್ಕರ ರಾವ್ ಕಿದಿಯೂರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು